ರಾಜೀನಾಮೆಗೂ ಮುನ್ನ ಸಿಎಂ ಕಚೇರಿ ಸಿಬ್ಬಂದಿ ವರ್ಗಾವಣೆ: ಆಪ್ತ, ಬೆಂಬಲಿಗ ಅಧಿಕಾರಗಳ ರಕ್ಷಣೆ ಮಾಡಿದರ ಸಿದ್ದು!?
ಸಿಎಂ ಹುದ್ದೆಯಿಂದ ಕೆಳಗಿಳಿದರೆ ಸೂಕ್ತ ಸ್ಥಾನ, ಹುದ್ದೆ ನೀಡುವ ಬಗ್ಗೆ ಅನುಮಾನವಿದ್ದ ಹಿನ್ನೆಲೆ ಮೊದಲೇ ಹುದ್ದೆ ನೀಡಿ ಆದೇಶ ಹೊರಡಿಸಿ, ಆಪ್ತ ಮತ್ತು ಬೆಂಬಲಿಗ ಅಧಿಕಾರಗಳ ರಕ್ಷಣೆಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Megha28.05.2026

ಬೆಂಗಳೂರು: ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನಾ ಸಿಎಂ ಕಚೇರಿಯ ಕೆಲ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರನ್ನು ಕೃಷಿ ಮತ್ತು ಮಾರಾಟ ಇಲಾಖೆಯ ನಿರ್ದೇಶಕರಾಗಿಯೂ ಹಾಗೂ ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ. ಕೋನರೆಡ್ಡಿ ಅವರನ್ನು ಕೆಪಿಟಿಸಿಎಲ್ ನಿರ್ದೇಶಕರಾಗಿ ವರ್ಗಾವಣೆ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯಿಂದ ಕೆಳಗಿಳಿದರೆ ಸೂಕ್ತ ಸ್ಥಾನ, ಹುದ್ದೆ ನೀಡುವ ಬಗ್ಗೆ ಅನುಮಾನವಿದ್ದ ಹಿನ್ನೆಲೆ ಮೊದಲೇ ಹುದ್ದೆ ನೀಡಿ ಆದೇಶ ಹೊರಡಿಸಿ, ಆಪ್ತ ಮತ್ತು ಬೆಂಬಲಿಗ ಅಧಿಕಾರಗಳ ರಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Related


Megha







