NEWSನಮ್ಮರಾಜ್ಯ

CM ಹುದ್ದೆ ಖಾಲಿ ಇಲ್ಲ: ಸಿದ್ದರಾಮಯ್ಯ ಪರ ಮತ್ತೆ ಬ್ಯಾಟ್‌ ಬೀಸಿದ ಸಚಿವ ಜಮೀರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಬೂದಿಮುಚ್ಚಿದ ಕೆಂಡಂತೆ ಹೊಗೆಯಾಡುತ್ತಿರುವ ಹಾಗೂ ಮೈಸೂರು ಮುಡಾ ಹಗರಣ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸದ್ಯಕ್ಕೆ ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇದ್ದರೆತಾನೇ ಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಬೇಕಿರೋದು. ಇದನ್ನು ನಾನು ಹಲವು ಬಾರಿ ಹೇಳುತ್ತಲೇ ಇದ್ದೇನೆ ಆದರೂ ಆ ಬಗ್ಗೆ ಕೆಲವರು ಏಕೆ  ಮಾತನಾಡುತ್ತಾರೆ  ಎಂಬುವುದು ಈವರೆಗೂ ಗೊತ್ದುತಾಗುತ್ತಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಇನ್ನು ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ ಅಂತಾ ನೀವೇ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು. ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರ ಯಾವುದೇ ಪಾತ್ರ ಇಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಬದಲಿ ಸೈಟ್‌ ಕೊಡಲಾಗಿದೆ. ಈಗಲೂ ಸಿಎಂ ಸಿದ್ದರಾಮಯ್ಯರಿಗೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದರು.

ಇನ್ನೂ ಬಿಜೆಪಿಯವರಿಗೆ ಮಾಡಲು ಏನೂ ಕೆಲಸ ಇಲ್ಲ. ಅದಕ್ಕಾಗಿಯೇ ಏನಾದರೂ ವಿಷಯ ಇಟ್ಟುಕೊಂಡು ಅದನ್ನೇ ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಸಿದ್ದರಾಮಯ್ಯರನ್ನು ಕಂಡರೆ ಆಗಲ್ಲ. ಅದಕ್ಕಾಗಿಯೇ ಸಿದ್ದರಾಮಯ್ಯರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?