NEWSನಮ್ಮರಾಜ್ಯಶಿಕ್ಷಣ-

ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ, ನಿರುದ್ಯೋಗಿ ಪದವೀಧರರಿಗೆ ನೀಡುವುದು ಒಂದು ಸಾಧನೆಯೇ: AAP ಲೋಹಿತ್ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಯೋಜನೆ ಮೂಲಕ ಮಾಸಿಕ ಭತ್ಯೆ ಕೊಡುವುದಾಗಿ ಹೇಳಿರುವ ರಾಜ್ಯ ಸರ್ಕಾರ ಯೋಜನೆ ಜಾರಿಗೆ ಮುನ್ನವೇ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಿಸಿರುವ ಕ್ರಮವನ್ನು ಆಮ್ ಆದ್ಮಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಜಿ. ಹನುಮಾಪುರ ಟೀಕಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಸರಿಯಾಗಿ ನಕಲು ಮಾಡುವಲ್ಲಿ ಕೂಡ ಕಾಂಗ್ರೆಸ್ ವಿಫಲವಾಗಿದೆ. ಪದವಿ ಪ್ರವೇಶ ಶುಲ್ಕ ಹೆಚ್ಚಿಸುವ ಮೂಲಕ ಅದೇ ಹಣದಲ್ಲಿ ಯುವನಿಧಿ ಯೋಜನೆ ಜಾರಿಗೆ ತರಲು ಮುಂದಾಗಿದೆ. ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ, ನಿರುದ್ಯೋಗಿ ಪದವೀಧರರಿಗೆ ನೀಡುವುದು ಒಂದು ಸಾಧನೆಯೇ ಎಂದು ಪ್ರಶ್ನಿಸಿದ್ದಾರೆ.

ಪದವಿ ಕೋರ್ಸ್ ಶುಲ್ಕವನ್ನು ಶೇಕಡಾ 10ರಷ್ಟು ಏರಿಕೆ ಮಾಡಲು ತೀರ್ಮಾನಿಸಿದ್ದು, ಶೀಘ್ರದಲ್ಲೇ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸುವ ಸಾಧ್ಯತೆಯಿದೆ. ರಾಜ್ಯ ಸರ್ಕಾರಕ್ಕೆ ಕಿಂಚಿತ್ತಾದರೂ ಯುವ ಜನತೆ, ಬಡ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಪದವಿ ಪ್ರವೇಶ ಶುಲ್ಕ ಹೆಚ್ಚಳ ಮಾಡುವ ಯೋಜನೆಯನ್ನು ಕೈಬಿಡಲಿ.

ಸರ್ಕಾರದ ಈ ನಿರ್ಧಾರದಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಹೊರೆಯಾಗಲಿದೆ. ಕಾಂಗ್ರೆಸ್ ಸರ್ಕಾರ ಚುನಾವಣಾ ರಾಜಕೀಯಕ್ಕೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬಾರದು. ಒಂದು ವೇಳೆ ಸರ್ಕಾರ ಶುಲ್ಕ ಹೆಚ್ಚಳ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಲೋಹಿತ್ ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ ಕೆ.ಆರ್.ಪೇಟೆ: ಲೋಕಾ ಅದಾಲತ್‌ನಲ್ಲಿ ನೂರಾರು ಪ್ರಕರಣಗಳು ಇತ್ಯರ್ಥ