CrimeNEWSಬೆಂಗಳೂರು

ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್​ ಬಳಿ ಶುಕ್ರವಾರ ಬೆಳಗ್ಗೆ ಜರುಗಿದೆ.

ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಕುಸುಮಿತಾ (21) ಎಂಬ ಯುವತಿಯೇ ಇಂದು ಬೆಳಗ್ಗೆ 8.30ಕ್ಕೆ ಕಾಲೇಜಿಗೆ ತೆರಳುತ್ತಿದ್ದಾಗ ಅವಘಡದಲ್ಲಿ ಅಸುನೀಗಿದವರು.

ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್​​​ ಬಳಿ ಬೈಕ್‌ನಲ್ಲಿ ಬರುತಿದ್ದ ಯುವತಿ, ಅಲ್ಲಿಂದ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದಳು. ಶುಕ್ರವಾರ ಬೆಳಗ್ಗೆ ಸಹ ಎಂದಿನಂತೆಯೇ, ಮಲ್ಲೇಶ್ವರದಿಂದ ಹೊರಟಿದ್ದಳು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಬಸ್ ಆಕೆ ತೆರಳುತ್ತಿದ್ದ ಬೈಕ್​ಗೆ ಡಿಕ್ಕಿಹೊಡೆದಿದೆ. ಬಳಿಕ ಬೈಕ್ ಸಮೇತ ಎಳೆದೊಯ್ದಿದೆ.

ಈ ಅಪಘಾತದಿಂದ ಗಾಯಾಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ