ಮೈಸೂರು: ಸಂಸದ ಪ್ರತಾಪ್ ಸಿಂಹಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಕಾಮೆಂಟ್ ಮಾಡಿದ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ (CHC 478, 2005 ನೇ ಬ್ಯಾಚ್) ಪ್ರಕಾಶ್ ಅಮಾನತುಗೊಂಡ ಪೊಲೀಸ್ ನೌಕರ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್‌ಬುಕ್ ಪೇಜ್‌ನಲ್ಲಿ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್ ಪೋಸ್ಟ್ ಒಂದಕ್ಕೆ ಸಂಸದ ಪ್ರತಾಪ್ ಸಿಂಹ ಅವರ ವೈಯುಕ್ತಿಕ ವಿಚಾರಗಳನ್ನು ಉದ್ದೇಶಿಸಿ ಕಾಮೆಂಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಂಸದರು ಸಂಬಂಧ ಪಟ್ಟ ಹೆಡ್ ಕಾನ್ಸ್ ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಮೀಷನರ್ ಅವರಿಗೆ ಪತ್ರ ಬರೆದಿದ್ದರು.
ಸಂಸದರ ದೂರಿನ ಮೇರೆಗೆ ಮೈಸೂರು ಪೊಲೀಸ್ ಆಯುಕ್ತರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಂದು ಆದೇಶ ಹೊರಡಿಸಿದ್ದಾರೆ.