NEWSನಮ್ಮಜಿಲ್ಲೆಬೆಂಗಳೂರು

ಮಳೆಗಾಲಕ್ಕೆ ಸನ್ನದ್ಧರಾಗಿ ಅಧಿಕಾರಿಗಳಿಗೆ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಎಲ್ಲ ವಿಭಾಗಗಳ ಇಂಜಿನಿಯರ್‌ಗಳಿಗೆ, ಅರಣ್ಯ ವಿಭಾಗದ ಅಧಿಕಾರಿಗಳಿಗೆ ಪಶ್ಚಿಮ ವಲಯದ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಾಕೀತು ಮಾಡಿದರು.

ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಮಳೆಗಾಲಕ್ಕೆ ತೆಗೆದುಕೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಪಶ್ಚಿಮ ವಲಯ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಾತನಾಡಿದರು.

ಮಳೆಗಾಲದ ವೇಳೆ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳು ಹಾಗೂ ರಸ್ತೆಗಳಲ್ಲಿ ಜಲಾವೃತವಾಗುವ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಸ್ತೆ ಬದಿಯ ಚರಂಡಿಗಳಲ್ಲಿರುವ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಪಶ್ಚಿಮ ವಲಯದಲ್ಲಿ ಬರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಬರುವ ನೀರುಗಾಲುವೆ ಹಾಗೂ ಚರಂಡಿಗಳಲ್ಲಿ ನಿರಂತರವಾಗಿ ಹೂಳೆತ್ತಬೇಕು. ಅಲ್ಲದೆ 6 ಉಪ ವಿಭಾಗಗಳಲ್ಲಿ ತೆರೆದಿರುವ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಕೂಡಲೇ ಇತ್ಯರ್ಥಪಡಿಸಲು ಸೂಚಿಸಿದರು.

ಕಾಮಗಾರಿಗೆ ಅಂದಾಜು ಪಟ್ಟಿ ಸಿದ್ದಪಡಿಸಿ: ಮಳೆಗಾಲದ ವೇಳೆ ಕೆ.ಆರ್.ಮಾರುಕಟ್ಟೆ ಹಾಗೂ ವಾಹನಗಳ ನಿಲುಗಡೆಯ ಸ್ಥಳದಲ್ಲಿ ನೀರು ನಿಲ್ಲುವುದರಿಂದ ವ್ಯಾಪಾರಸ್ತರು ಹಾಗೂ ಗ್ರಾಹಕರು/ನಾಗರಿಕರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಕಾಮಗಾರಿ ನಡೆಸಲು ಅಂದಾಜು ಪಟ್ಟಿ ಸಿದ್ದಪಡಿಸಲು ಅಧಿಕಾರಿಗಳು ಸೂಚಿಸಿದರು.

ಈ ವೇಳೆ ವಲಯ ಜಂಟಿ ಆಯುಕ್ತರಾದ ಸಂಗಪ್ಪ, ಮುಖ್ಯ ಅಭಿಯಂತರರಾದ ಶಶಿಕುಮಾರ್, ಕಾರ್ಯಪಾಕ ಅಭಿಯಂತರರು, ಕಂದಾಯ ಅಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ