ಬೆಂಗಳೂರು: ವಕೀಲರೊಬ್ಬರನ್ನು ಬಿಎಂಟಿಸಿ ನೌಕರರೊಬ್ಬರು ನಿದಿಸಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯರ್ಶಿಯವರಿಗೆ ದೂರು ಸಲ್ಲಿಸುವುದಾಗಿ ವಕೀಲರು ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ ನೌಕರರಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ಮೂರನೇ ವ್ಯಕ್ತಿಯಾಗಿ ಬಂದ ಈತ ಪ್ರಕರಣಕ್ಕೂ ಈತನಗೂ ಯಾವುದೇ ಸಂಬಂಧವಿಲ್ಲದಿದ್ದರೂ ವಕೀಲರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಈ ಬಿಎಂಟಿಸಿಯ ನೌಕರನ ವಿರುದ್ಧ ವಕೀಲರಾದ ಎಚ್.ಬಿ.ಶಿವರಾಜು ಅವರು ದೂರು ದಾಖಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಇದಿಷ್ಟೇ ಅಲ್ಲದೆ, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ವಕೀಲರ ನಿಂದನೆ ಮಾಡಿರುವುದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ತಿಳಿಸಿದ್ದಾರೆ.
ಇನ್ನು ಈ ಹಿಂದಿನಿಂದಲೂ ಬಿಎಂಟಿಸಿಯ ಈ ನೌಕರ ವಕೀಲರನ್ನು ಕೀಳುಮನೋಭಾವದಿಂದ ಕಾಣುತ್ತಿದ್ದು, ಈ ಬಗ್ಗೆ ಮೂರು-ನಾಲ್ಕು ಬಾರಿ ಎಚ್ಚರಿಕೆ ನೀಡಿದರು ಮತ್ತೆ ಹಳೆ ಚಾಳಿಯನ್ನೇ ಮುಂದುವರಿಸುತ್ತಿರುವುದರಿಂದ ನಾವು ಮಾನಸಿಕವಾಗಿ ನೋವು ಅನುಭವಿಸುತ್ತಿದ್ದು, ಈತನ ವಿರುದ್ಧ ಸೂಕ್ತ ಕ್ರಮ ಜರುಗಿಸಸಬೇಕು ಎಂದು ಅಸೋಸಿಯೇಷನ್‌ಗೆ ದೂರು ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ನಾವು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ಸದಸ್ಯರಾಗಿರುವುದರಿಂದ ಅಲ್ಲೇ ದೂರು ನೀಡಬೇಕಿದ್ದು ಹೀಗಾಗಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ನಲ್ಲೇ ದೂರು ದಾಖಲಿಸುತ್ತಿರುವುದಾಗಿ ವಿವರಿಸಿದ್ದಾರೆ.