NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನ ಸಂಪೂರ್ಣ ಮಾಹಿತಿ

ಜನತೆಯೇ ನನ್ನ ಪಾಲಿನ ಜನಾರ್ಧನರು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ :ಸಿದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಇನ್ನು ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ.

ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ.

ನಾಡಿನ ಏಳು ಕೋಟಿ ಕನ್ನಡಿಗರೂ ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿ ಆಗಬೇಕು ಎಂಬ ಸದಾಶಯದೊಂದಿಗೆ ರೂಪಿಸಿರುವ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ಅಭಿವೃದ್ಧಿ ಮಾದರಿಯ ಬಜೆಟ್ ಇದಾಗಿದೆ.

ಅಲ್ಲದೆ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

“ಶಕ್ತಿ ಯೋಜನೆ” •ಸರ್ಕಾರಿ ಬಸ್‌ ಗಳಲ್ಲಿ ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ •ವಾರ್ಷಿಕ ಅಂದಾಜು 4,000 ಕೋಟಿ ರೂ. ವೆಚ್ಚದ ನಿರೀಕ್ಷೆ.

•ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚಟುವಟಿಕೆ ಕೈಗೊಳ್ಳಲು ಅವಕಾಶ. •ಮಹಿಳೆಯರಿಗೆ ಪ್ರಯಾಣ ವೆಚ್ಚದ ಉಳಿತಾಯ ಹಾಗೂ ಸುರಕ್ಷಿತ ಪ್ರಯಾಣದ ವಾತಾವರಣ. •ಪ್ರತಿ ದಿನ ಸುಮಾರು 50 – 60 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಬಜೆಟ್‌ನಲ್ಲಿ ಸಿಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿ ರಾಜ್ಯ ಬಜೆಟ್‌ನ ಸಂಪೂರ್ಣ ವಿವರಗಳನ್ನೊಳಗೊಂಡ ಪಿಡಿಎಫ್‌ ಫೈಲ್‌ ನಿಮಗಾಗಿ ವಿಜಯಪಥದಲ್ಲಿ  1_BudgetSpeechJULY2023-24(Kan) 

 

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ