NEWSಬೆಂಗಳೂರು

ತ್ವರಿತವಾಗಿ ಮೂಲಸೌಕರ್ಯ ಅಭಿವೃದ್ದಿ ಕಾಮಗಾರಿ ಮುಗಿಸಿ: ಆಯುಕ್ತ ರಮೇಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಅನುದಾನಗಳ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಅಭಿವೃದ್ದಿ ಕಾಮಗಾರಿಗಳಿಗೆ ವೇಗ ನೀಡುವ ಮೂಲಕ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಆಯುಕ್ತ ಡಿ.ಎಸ್. ರಮೇಶ್‌ ತಾಕೀತು ಮಾಡಿದರು.

ಯಮಲೂರು ಜಂಕ್ಷನ್-ಹೊರ ವರ್ತುಲ ರಸ್ತೆ ಜಂಕ್ಷನ್: ದೊಡ್ಡನೆಕ್ಕುಂದಿ ಮುಖ್ಯ ರಸ್ತೆಯ ಯಮಲೂರು ಜಂಕ್ಷನ್ನಿಂದ ಹೊರ ವರ್ತುಲ ರಸ್ತೆ ಜಂಕ್ಷನ್ವರೆಗೆ ಸುಮಾರು1.8 ಕಿ.ಮೀ ರಸ್ತೆ ಅಭಿವೃದ್ಧಿ ಕಾರ್ಯವನ್ನು ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ (ಸಿಎಂಐಡಿಪಿ) ಅನುದಾನದಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಪ್ರಸ್ತುತ ಡೀಸಿಲ್ಟಿಂಗ್ ಮತ್ತು ಮಿಲ್ಲಿಂಗ್ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಅಮೃತ ನಗರೋತ್ಥಾನ ಯೋಜನೆ – ವೈಟ್ ಟಾಪಿಂಗ್: ದೊಡ್ಡನೆಕ್ಕುಂದಿ ಗ್ರಾಮದಲ್ಲಿ ಅಮೃತ ನಗರೋತ್ಥಾನ ಅನುದಾನದಡಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಈಗಾಗಲೇ ಕಾಮಗಾರಿಯ 50% ಪೂರ್ಣಗೊಂಡಿದೆ.ಬಾಕಿ ಕಾಮಗಾರಿಯನ್ನು ಮಾ.15ರೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಗೋಪಾಲನ್ ಶಾಲೆ-ಗೋಶಾಲೆ ರಸ್ತೆ: ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ (ಸಿಎಂಐಡಿಪಿ) ಅನುದಾನದಡಿಯಲ್ಲಿ ದೊಡ್ಡನೆಕ್ಕುಂದಿ ಗ್ರಾಮದ ಗೋಪಾಲನ್ ಶಾಲೆಯಿಂದ ಗೋಶಾಲೆ ರಸ್ತೆವರೆಗೂ ಸುಮಾರು 1.2 ಕಿಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಡೀಸಿಲ್ಟಿಂಗ್ ಕಾರ್ಯ, ಕೋಪಿಂಗ್ ಕಾಂಕ್ರೀಟ್ ಅಳವಡಿಕೆ ನಡೆಯುತ್ತಿದ್ದು, ಕಾಮಗಾರಿಗೆ ವೇಗ ನೀಡಲು ಸೂಚಿಸಿದರು.

ಹೋಪ್ ಫಾರ್ಮ್ ಅಂಡರ್ಪಾಸ್ ಕಾಮಗಾರಿ ಪರಿಶೀಲನೆ: ಹೋಪ್ ಫಾರ್ಮ್ ಜಂಕ್ಷನ್ ಬಳಿ ಅಂಡರ್ಪಾಸ್ ಕಾಮಗಾರಿ ಪ್ರಗತಿಯನ್ನು ಪರಿಶೀಲಿದ ಆಯುಕ್ತರು ಅಗತ್ಯ ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಅನುಮತಿಗಳನ್ನು ತ್ವರಿತವಾಗಿ ಪಡೆದುಕೊಳ್ಳುವಂತೆ ಸೂಚಿಸಿದರು, ಹಾಗೂ ಇದೇ ಪ್ಯಾಕೇಜ್ ಗೆ ಸಂಬಂಧಿಸಿದ ಬಿಗ್ ಬಜಾರ್ ಮತ್ತು ಹೂಡಿ ವೃತ್ತದ ಹತ್ತಿರದ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಿಸಲು ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.

ಪಾದಚಾರಿ ಮಾರ್ಗಗಳ ಅತಿಕ್ರಮ-ತೆರವು: ಗರಡಾಚಾರ್ ಪಾಳ್ಯ ಮುಖ್ಯರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿ ಒತ್ತುವರಿಯನ್ನು ಗಮನಿಸಿದಆಯುಕ್ತರು ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಅಡೆತಡೆ ರಹಿತ ಸುರಕ್ಷಿತ ಪಾದಚಾರಿ ಮಾರ್ಗವನ್ನು ಕಲ್ಪಿಸುಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆ ಬದ್ಧವಾಗಿದ್ದು, ಕಾಮಗಾರಿಗಳಿಗೆ ಗಡುವು ನಿಗದಿ ಮಾಡಿ, ಯೋಜನೆಗಳ ಪ್ರಗತಿಗೆ ಆದ್ಯತೆ ನೀಡುವ ಮೂಲಕ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ಆಯುಕ್ತರ ಪರಿಶೀಲನೆ ವೇಳೆಯಲ್ಲಿ ಮುಖ್ಯ ಅಭಿಯಂತರರಾದ ಎಂ.ಲೋಕೇಶ್, ಕಾರ್ಯಪಾಲಕ ಅಭಿಯಂತರ ಟಿ.ಸಿ.ರವಿಕುಮಾರ್ ಮತ್ತು ಭೂಪ್ರದ, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಇದ್ದರು.

Megha
the authorMegha

Leave a Reply

error: Content is protected !!
Latest news
ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ...