NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.20ರಂದು ಸಾರಿಗೆ ನೌಕರರ ಮುಷ್ಕರ ಸಂಬಂಧ ರಾಜೀಸಂಧಾನ ಸಭೆ: ಕಾರ್ಮಿಕ ಇಲಾಖೆ ಆಯುಕ್ತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾ.24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಮಾನ ಮನಸ್ಕರ ವೇದಿಕೆ ಕರೆ ನೀಡಿರುವ ಹಿನ್ನೆಯಲ್ಲಿ ಮಾ.20ರಂದು ಕಾರ್ಮಿಕ ಇಲಾಖೆಯ ಆಯುಕ್ತರು ಸಂಧಾನ ಸಭೆ ಆಯೋಜಿಸಿದ್ದಾರೆ.

ಕಾರ್ಮಿಕ ಸಂಘದವರು ಇದೇ ಮಾ.8ರಂದು ಮಾ.24ರಂದು ಮುಷ್ಕರ ಮಾಡುವುದಾಗಿ ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ಆಡಳಿತ ವರ್ಗ ಮತ್ತು ಕಾರ್ಮಿಕ ಸಂಘದವರ ನಡುವೆ ಕೈಗಾರಿಕಾ ವಿವಾದ ಉದ್ಬವಿಸಿದೆ ಎಂದು ಪರಿಗಣಿಸಿ ಈ ಸಂಬಂಧ ಮಧ್ಯೆ ಪ್ರವೇಶಿಸುವುದು ಅವಶ್ಯವೆಂದು ಮಾ.20ರಂದು ಮಧ್ಯಾಹ್ನ 2.30ಕ್ಕೆ ರಾಜೀಸಂಧಾನ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಭೆಗೆ ಸಾರಿಗೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಆಗಮಿಸಬೇಕು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

ನೌಕರರ ವೇತವ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸಿಲ್ಲವೆಂದು ಮಾ.24ರಂದು ಮುಷ್ಕರ ನಡೆಸುತ್ತಿರುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ ಅವರು 08.03.20 ರಂದು ಮುಷ್ಕರ ನೋಟಿಸ್ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಆಡಳಿತವರ್ಗ ಮತ್ತು ಕಾರ್ಮಿಕ ಸಂಘದವರ ನಡುವೆ ಕೈಗಾರಿಕಾ ವಿವಾದ ಉದ್ಯಮಿಸಿದೆ ಎಂದು ಪರಿಗಣಿಸಿ, 20.03.2023 ರಂದು ಅಪರಾಹ್ನ 02.30 ಗಂಟೆಗೆ ರಾಜೀ ಸಂಧಾನ ಸಭೆಯನ್ನು ನಿಗದಿಪಡಿಸಿದ್ದು, ಈ ಸಂಧಾನ ಸಭೆಗೆ ಆಡಳಿತವರ್ಗ ಮತ್ತು ಕಾರ್ಮಿಕ ಸಂಘದವರು ಹಾಜರಿರಬೇಕೆಂದು ಆಯುಕ್ತರು ಸೂಚನೆ ನೀಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ