NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌ ಗ್ಯಾರಂಟಿಗೆ ಈಗ ಷರತ್ತುಗಳು ಅನ್ವಯ: ಅಧಿಕಾರ ಖಚಿತವಾದಮೇಲೆ ಉಲ್ಟಾ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳನ್ನು ಹಾಕಲಾಗುವುದು ಎಂದು ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಬಹುತಪಡೆದಿದ್ದು ಅಧಿಕಾರಕ್ಕೆ ಬಂದಿದೆ. ಹೀಗಾಗಿ ಗ್ರಾಮೀಣ ಭಾಗದ ಜನರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇದ್ದು ಜಾರಿ ಮಾಡೇ ಮಾಡಡುತ್ತೇವೆ ಎಂದು ಹೇಳಿದರು.

ಇನ್ನಿ ಆಯಾಯ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.

ಸಿಎಂ ಆಯ್ಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕುಳಿತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಜತೆ ಶಾಸಕರು ಹೋಗಿ ಶಕ್ತಿ ಪ್ರದರ್ಶನ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವು ಶಾಸಕರು ಅವರ ನಾಯಕರ ಜತೆ ಅಂತ ಹೋಗಿದ್ದಾರೆ. ಅದನ್ನ ಶಕ್ತಿ ಪ್ರದರ್ಶನ ಎಂದು ಹೇಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಈ ಎಲ್ಲದರ ನಡುವೆ ಚುನಾವಣೆ ಸಮಯದಲ್ಲಿ ಯಾವುದೇ ಷರತ್ತುಗಳನ್ನು ಣಿಡದ ಕಾಂಗ್ರೆಸ್‌ ಈಗ ಗ್ಯಾರಂಟಿ ವಿಷಯದಲ್ಲಿ ಷರತ್ತುಗಳನ್ನು ಹಾಕುತ್ತಿರುವುದು ಯಾವ ನ್ಯಾಯ ಎಂದು ನಾಡಿನ ಜತೆಗೆ ಕೇಳುತ್ತಿದ್ದಾರೆ. ಅದಕ್ಕೆ ಸಿಎಂ ಆದರು ಉತ್ತರ ಕೊಡಬೇಕಿದೆ.

ಕಾಂಗ್ರೆಸ್‌ನ 5 ಗ್ಯಾರಂಟಿಗಳು ಯಾವುವು?: ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ., ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ, ಡಿಪ್ಲೋಮಾ ಮಾಡಿದವರಿಗೆ ಪ್ರತಿ ತಿಂಗಳು 1,500 ರೂ.ಭತ್ಯೆ , ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ.

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?