NEWSನಮ್ಮಜಿಲ್ಲೆನಮ್ಮರಾಜ್ಯ

KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌

ವಿಜಯಪಥ ಸಮಗ್ರ ಸುದ್ದಿ

ಬೀದರ್: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕ ಮರೆತು ಹೋಗಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮರಳಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಂಡಕ್ಟರ್ ಮಾನವೀಯತೆ ಮೆರೆದಿದ್ದಾರೆ

ಭಾಲ್ಕಿ ನಿಲ್ದಾಣದಿಂದ ಮಹಾರಾಷ್ಟ್ರದ ನಿಲಂಗಾಕ್ಕೆ ಪ್ರಯಾಣ ಬೆಳೆಸಿದ್ದ ಮಹ್ಮದ್ ಎಂಬುವರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಸ್ಸಿನಲ್ಲಿ ಮೆರೆತು ಹೋಗಿದ್ದರು.

ಬಳಿಕ ಚಿನ್ನಾಭರಣ ಬಸ್ಸಿನಲ್ಲಿ ಬಿಟ್ಟಿದ್ದು ನೆನಪಾದ ಬಳಿಕ ಗಾಬರಿಗೊಂಡು ಬಸ್ ನಿಲ್ದಾಣಕ್ಕೆ ಓಡೋಡಿ ಬಂದಿದ್ದಾರೆ. ಆ ವೇಳೆ ನಿರ್ವಾಹಕ ಪ್ರಕಾಶ ಹತ್ತಿರ ಚಿನ್ನಾಭರಣ ಸುರಕ್ಷಿತವಾಗಿರುವ ವಿಷಯ ತಿಳಿದು ನಿಟ್ಟುಸಿರುಬಿಟ್ಟಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ಘಟಕದ ಬಸ್‌ನಲ್ಲಿ ಚಿನ್ನಾಭರಣ ಮರೆತು ಹೋಗಿದ್ದ ಪ್ರಯಾಣಿಕನಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮರಳಿ ಕೊಟ್ಟ ನಿರ್ವಾಹಕರ ಮಾನವೀಯತೆಯನ್ನು ಸಹ ಪ್ರಯಾಣಿಕರು ಶ್ಲಾಘಿಸಿದ್ದಾರೆ.

ಅಲ್ಲದೆ ನಿರ್ವಾಹ ಪ್ರಕಾಶ ಅವರ ಪ್ರಮಾಣಿಕತೆ ಮೆಚ್ಚಿ ಪ್ರಯಾಣಿಕ ಮಹ್ಮದ್ ಅಜರ್ ಹಾಗೂ ಸಾರಿಗೆ ಅಧಿಕಾರಿಗಳು ಚಾಲಕ ಹಾಗೂ ನಿರ್ವಾಹಕ ಇಬ್ಬರನ್ನು ಸನ್ಮಾಸಿ ಗೌರವಿಸಿದ್ದಾರೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ