CrimeNEWSನಮ್ಮಜಿಲ್ಲೆ

ದಕ್ಷಿಣ ಕನ್ನಡ: ಬಸ್ಸಿನಲ್ಲಿ ಗಲಾಟೆ ಮಾಡಿದ ಪಾನಮತ್ತ ಪ್ರಯಾಣಿಕನಿಗೆ ಒದ್ದ ನಿರ್ವಾಹಕ ಅಮಾನತು

ವಿಜಯಪಥ ಸಮಗ್ರ ಸುದ್ದಿ

ದಕ್ಷಿಣ ಕನ್ನಡ: ಬಸ್ಸಿನಲ್ಲಿ ಗಲಾಟೆ ಮಾಡಿದ ಪಾನಮತ್ತ  ಪ್ರಯಾಣಿಕರೊಬ್ಬರ ಮೇಲೆ  ಕೆಎಸ್‌ಆರ್‌ಟಿಸಿ ನಿರ್ವಾಹಕ ಹಲ್ಲೆ ಮಾಡಿದ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ನಿರ್ವಾಹನ ನಡೆ ತಕ್ಷಣಕ್ಕೆ ತಪ್ಪು ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ  ಅಮಾನತು ಮಾಡಿ ಕೆಎಸ್‌ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರ್ವಾಹಕ ಪಾನಮತ್ತ ಪ್ರಯಾಣಿಕನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿದ್ದಾರೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆದರೆ, ಅದರ ಹಿಂದಿರುವ  ಸತ್ಯ ಏನು ಎಂಬುದರ ಬಗ್ಗೆ ನಿಗಮದ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುವ ಮೂಲಕ ಬಹಿರಂಗಪಡಿಸಬೇಕಿದೆ.

ಇನ್ನು ಆ ಕೆಎಸ್‌ಆರ್ಟಿಸಿ ಬಸ್ ಕಂಡೆಕ್ಟರ್ ಅಮಾನವೀಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಇದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಆ ವಿಡಿಯೋ ನೋಡಿದ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಸಂಜೆ ಪುತ್ತೂರು ಘಟಕದ ಕಂಡಕ್ಟರ್ ಸುಖರಾಜ ರೈ ಎಂ. ಪುತ್ತೂರು ತಾಲೂಕಿನ ಈಶ್ವರ ಮಂಗಲದಲ್ಲಿ ಓರ್ವ ಮದ್ಯಪಾನ ಮಾಡಿದ ಪ್ರಯಾಣಿಕರನ್ನು ವಾಹನದಿಂದ ಕೆಳಗಡೆಗೆ ಇಳಿಸುವಾಗ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಕಂಡಕ್ಟರ್ ನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ನಿಗಮದ ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳಿವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿ ಎಂದು ಕೆಎಸ್‌ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.

ನಿಗಮದ ಸಿಬ್ಬಂದಿಗಳಿಗೆ‌ ಇನ್ನೂ‌ ಹೆಚ್ಛಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.

ಇನ್ನು ಹಲ್ಲೆಗೆ ಒಳಗಾದ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮವು ಭರಿಸಲಿದೆ. ನಿಗಮವು ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.

ನೋಡಿ ಮೊನ್ನೆ ಪುತ್ತೂರಿನಲ್ಲಿ ನಡೆದ ಘಟನೆಯಲ್ಲಿ ಸಾರ್ವಜನಿಕರು ಮಾಡಿದ ವಿಡಿಯೋದಲ್ಲಿ ನಿರ್ವಾಹಕರ ತಪ್ಪು ಇದೆಯೋ ಇಲ್ಲವೋ ಅದು ವಿಚಾರಣೆಯಿಂದ ಗೊತ್ತಾಗಲಿದೆ. ಆದರೆ, ಬಲಿಯಾದವರು ನಿರ್ವಹಕ. ಆದ್ದರಿಂದ ಕರ್ತವ್ಯ ನಿರ್ವಹಿಸುವಾಗ ದಯಮಾಡಿ ಚಾಲಕರಾಗಲಿ, ನಿರ್ವಾಹಕರಾಗಲಿ ಪ್ರಯಾಣಿಕರ ಬಳಿ ಅಸಭ್ಯವಾಗಿ ವರ್ತಿಸಬೇಡಿ ಎಂದು ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...