ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ ತುಂಬ ವೇತನ ಕೊಡುವ ಖಾಸಗಿ ಕಂಪನಿಯಲ್ಲಿ ಮುಖ್ಯ ಕಾನೂನು ಸಲಹೆಗಾರ ಹುದ್ದೆ ಸಿಕ್ಕಿದೆ.
ಕಳೆದ 2019ರಿಂದ ಇಲ್ಲಿಯ ವರೆವಿಗೂ ಸಾರಿಗೆ ಅಧಿಕಾರಿಗಳ ಕಿರುಕುಳಕ್ಕೆ ಒಳಗಾಗಿ ಹಾಗೂ 2021ರ ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ಕೇಸ್ ದಾಖಲಾಗಿದ್ದ ಹಲವು ನೌಕರರ ಪರ ಉಚಿತವಾಗಿ ವಕಾಲತ್ತು ವಹಿಸುವ ಮೂಲಕ ಕರ್ನಾಟಕ ಹೈ ಕೋರ್ಟ್‌ನಲ್ಲಿ ಅವರಿಗೆ ನ್ಯಾಯದೊರಕಿಸಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಅಲ್ಲದೆ ಮೈಸೂರು ನಗರದ ಮಾಜಿ ಶಾಸಕ ಎಸ್.ಎ.ರಾಮದಾಸ್ ಅವರಿಂದ ದೌರ್ಜನ್ಯಕ್ಕೆ ಒಳಗಾಗಿದ್ದ ಮೈಸೂರು ಮೂಲಕ ಮಹಿಳೆಗೆ ಪ್ರೇಮಕುಮಾರಿ ಪರ ಸುಪ್ರೀಂ ಕೋರ್ಟ್‌ನಲ್ಲಿ ಉಚಿತವಾಗಿ ವಕಲತ್ತು ಹಾಕುವ ಮೂಲಕ ಅವರಿಗೂ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಜತೆಗೆ ಹಲವು ಶಾಸಕರ ಪರವಾಗಿ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳ ವಕಾಲತ್ತು ವಹಿಸಿದ್ದಾರೆ.
ಇನ್ನು ಬಹಳ ಮುಖ್ಯವಾಗಿ ವಿಜಯಪಥ ಸಂಪಾದಕರಾದ ದೇವರಾಜು ಅವರು ಸಾರಿಗೆ ನೌಕರರ ಪರ ಧ್ವನಿಯಾಗಿದ್ದಕ್ಕೆ ಬಿಎಂಟಿಸಿ ಜಯನಗರ ಡಿಪೋ -4ರ ಘಟಕ ವ್ಯವಸ್ಥಾಪಕನಾಗಿದ್ದ ಪ್ರಶಾಂತ್ ಎಂಬುವನು ಡ್ಯೂಟಿ ಮಾಡುತ್ತಿದ್ದ ನಮ್ಮ ನೌಕರನಿಗೆ ಭಯಹುಟ್ಟಿಸಿ ಡ್ಯೂಟಿಗೆ ಅಡ್ಡಿಪಡಿಸಿದ್ದಾರೆ ಎಂದು ಸುಳ್ಳು ಕೇಸ್ ಹಾಕಿದ್ದರ ವಿರುದ್ಧ ಹೈ ಕೋರ್ಟ್‌ನಲ್ಲಿ ಉಚಿತವಾಗಿ ವಕಾಲತ್ತು ವಹಿಸಿ ಕೆಳಹಂತದ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಕ್ಕೆ ಸ್ಟೇ ತರುವ ಮೂಲಕ ನ್ಯಾಯದ ಪರ ನಿಂತಿದ್ದಾರೆ.
ಹೀಗೆ ಹಲವಾರು ರೀತಿಯಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದ ಸಾರಿಗೆ ನೌಕರರು ಸೇರಿದಂತೆ ಹಲವರಿಗೆ ಕಾನೂನಿಕೊಂಡಿಯಾಗಿ ನ್ಯಾಯಾಲಯಗಳಲ್ಲಿ ವಕಾಲತ್ತು ವಹಿಸಿ ನ್ಯಾಯಕೊಡಿಸಿದ್ದು, ಈಗಲೂ ಕೊಡಿಸುತ್ತಿರುವ ವಕೀಲರ ಶಿವರಾಜು ಅವರಿಗೆ ಆಂಧ್ರ ಮೂಲದ ಆರ್.ಆರ್.ಇನ್‌ಫ್ರಾಸ್ಟ್ರಕ್ಚರ್ ಕಂಪನಿಯ ಮುಖ್ಯ ಕಾನೂನು ಸಲಹೆಗಾರ ಹುದ್ದೆಗೆ ನೇಮಕಗೊಂಡಿದ್ದಾರೆ.
ವಕೀಲ ಶಿವರಾಜು ಅವರು ಆರ್.ಆರ್.ಇನ್‌ಫ್ರಾಸ್ಟ್ರಕ್ಚರ್ ಕಂಪನಿಗೆ ಸಂಬಂಧಪಟ್ಟ ಸಿವಿಲ್ ಪ್ರಕರಣಗಳ ಸಂಬಂಧ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಕಟ ಹೈ ಕೋರ್ಟ್‌ಗಳಲ್ಲಿ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ವಕಾಲತ್ತು ವಹಿಸಲಿದ್ದಾರೆ. ಹೀಗಾಗಿ ಇವರಿಗೆ ಕಾರ್ಯಭಾರ ಹೆಚ್ಚಾಗಿರುವುದರಿಂದ ಉಳಿದುಕೊಳ್ಳುವುದಕ್ಕೆ ಮನೆ, ಓಡಾಡುವುಕ್ಕೆ ಕಾರು ಸೇರಿದಂತೆ ಇತರೆ ಸೌಲಭ್ಯಗಳನ್ನು ಕಂಪನಿ ನೀಡಲಿದ್ದು, ಜತೆಗೆ ಕೈ ತುಂಬ ವೇತನವನ್ನು ಕೊಡಲಿದೆ.

ಈ ಹಿನ್ನೆಲೆಯಲ್ಲಿ ಕಂಪನಿಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕಿರುವುದರಿಂದ ಇತರೆ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮನಕೊಡಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಕಾವೇರಿ ಲಾ ಅಸೋಸಿಯೇಷನ್‌ನ ಎಲ್ಲ ಜವಾಬ್ದಾರಿಗಳನ್ನು ನಮ್ಮ ಸಂಬಂಧಿ ವಕೀಲರಾದ ಕಾವೇರಿ ಅವರು ನೋಡಿಕೊಳ್ಳಲಿದ್ದಾರೆ.
ಇನ್ನು ಇಲ್ಲಿಯವರೆವಿಗೂ ನಾವು ಸಾರಿಗೆಯ ಕೆಲ ನೌಕರರು ಏನೆ ಅಂದುಕೊಂಡರು ಅದಕ್ಕೆ ಕಿವಿಯಾಗದೆ ನೊಂದ ನೌಕರರ ಪರವಾಗಿ ಸಾಧ್ಯವಾದಷ್ಟು ಸೇವೆ ನೀಡಿದ್ದೇವೆ ಹೀಗಾಗಿಯೇ ನಮಗೆ ಈ ಹುದ್ದೆ ಒಲಿದುಬಂದಿದೆ ಎಂದರೂ ತಪ್ಪಾಗುವುದಿಲ್ಲ ಎಂದು ವಕೀಲರು ಖುಷಿ ಹಂಚಿಕೊಂಡಿದ್ದಾರೆ.
ಸಾರಿಗೆ ನೌಕರರು ಸೇರಿದಂತೆ ನೂರಾರು ಜನರಿಗೆ ಉಚಿತವಾಗಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಿ ನೊಂದವ ಪರ ನಿಂತ ವಕೀಲರಾದ ಶಿವರಾಜು ಅವರು ನೂರಾರುಕಾಲ ಸುಖವಾಗಿ, ಇನ್ನಷ್ಟು ಉನ್ನತ ಹುದ್ದೆಗೇರಲಿ. ಅವರಿಗೆ ಸಿಕ್ಕಿರುವ ಹುದ್ದೆ ಕೀರ್ತಿಯ ಜತೆಗೆ ಅಷ್ಟೈಶ್ವರ್ಯಸಂಪನ್ನರನ್ನಾಗಿ ಮಾಡಲಿ ಎಂದು ನಾವೆಲ್ಲರೂ ಮನತುಂಬಿ ಹಾರೈಸೋಣ.
Related


You Might Also Like
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...