NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್‌ ಕೈವಾಡ : ಸಿಎಂ ಬೊಮ್ಮಾಯಿ ಹೇಳಿಕೆ ಸಿದ್ದರಾಮಯ್ಯ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಘಟನೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಕಲ್ಲು ತೂರಾಟದ ಬಗ್ಗೆ ಬಿಎಸ್‌ವೈ ಏನು ಹೇಳಿದ್ದಾರೆ. ಕಲ್ಲುತೂರಾಟಕ್ಕೂ ಕಾಂಗ್ರೆಸ್‌ಗೂ ಸಂಬಂಧ ಇಲ್ಲ ಎಂದಿದ್ದಾರೆ. ಯಡಿಯೂರಪ್ಪನವರೇ ಕಾಂಗ್ರೆಸ್‌ಗೆ ಸಂಬಂಧ ಇಲ್ಲ ಅಂತಾ ಹೇಳಿದ್ದಾರೆ. ಬಿಎಸ್‌ವೈಗಿಂತ ಸಿಎಂ ಬೊಮ್ಮಾಯಿಗೆ ಹೆಚ್ಚು ಗೊತ್ತಾ ಬೊಮ್ಮಾಯಿಗಿಂತ ಹೆಚ್ಚು ಮಾಹಿತಿ ಬಿಎಸ್‌ವೈಗೆ ಇರುತ್ತೆ ಎಂದು ಟಾಂಗ್ ನೀಡಿದರು.

ಕಲ್ಲು ತೂರಾಟ ಆರೋಪಿ ತಮ್ಮ ಜತೆ ಫೋಟೊ ತೆಗೆಸಿಕೊಂಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಾರೋ ಬರುತ್ತಾರೆ. ನನ್ನ ಜತೆ ಫೋಟೋ ತೆಗೆದುಕೊಳ್ಳುತ್ತಾರೆ. ಅವರು ಒಳ್ಳೆಯವರು ಕೆಟ್ಟವರ ಅಂತಾ ನನಗೆ ಏನು ಗೊತ್ತು. ರಾಜಕೀಯ ಕಾರಣಕ್ಕಾಗಿ ಏನೇನೋ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯ ಆಂತರಿಕ ಕುತಂತ್ರ: ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ, ಇದು ಬಿಜೆಪಿಯ ಆಂತರಿಕ ಕುತಂತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗೊಂದಲ ಮಾಡುತ್ತಿದ್ದಾರೆ. ಬಿಎಸ್ ವೈ ಅವರನ್ನ ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌

ಸಿಎಂ ಬಸವರಾಜ ಬೊಮ್ಮಾಯಿ ಮನೆ ಮೇಲೆ ಕಲ್ಲು ಹೊಡೆದಿದ್ರೆ ಓಕೆ. ಆದರೆ ಬಿಎಸ್‌ವೈ ಮನೆ ಮೇಲೆ ಕಲ್ಲು ಹೊಡೆಯುತ್ತಾರೆ ಅಂದ್ರೆ ಏನರ್ಥ ಇದು ಬಿಜೆಪಿ ಆಂತರಿಕ ಸಮಸ್ಯೆ. ಬಿಎಸ್‌ವೈ ರಾಜಕೀಯವಾಗಿ ಮುಗಿಸಬೇಕು ಎಂದು ತಂತ್ರ ಮಾಡಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಕಿಡಿಕಾರಿದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ