NEWSನಮ್ಮಜಿಲ್ಲೆನಮ್ಮರಾಜ್ಯ

ಭ್ರಷ್ಟಾಚಾರ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು: ಎಎಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ಸರ್ಕಾರದಲ್ಲೂ ಶೇ.40 ಕಮಿಷನ್ ಮುಂದುವರಿದಿದೆ ಎಂದು ಹೇಳಿರುವುದು ಆಘಾತಕಾರಿ ಸಂಗತಿ. ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ, ಹೋರಾಟ ಮಾಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅದನ್ನೇ ಮಾಡುತ್ತಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಎನ್ನುವ ಅಭಿಯಾನ ಮಾಡಿದ್ದ ಕಾಂಗ್ರೆಸ್, ಚುನಾವಣೆಗೆ ಮುನ್ನ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಭರವಸೆ ನೀಡಿತ್ತು. ಅಧಿಕಾರಕ್ಕೆ ಸಿಕ್ಕ ಬಳಿಕ ಮಾಡುತ್ತಿರುವುದೇನು ಎಂದು ಪ್ರಶ್ನಿಸಿದ್ದಾರೆ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಚಾಮರಾಜಪೇಟೆಯ ಗುತ್ತಿಗೆದಾರರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿಯೂ ಭ್ರಷ್ಟ ಅಧಿಕಾರಿಗಳು ಇದ್ದಾರೆಂದು ಹೇಳಿದ್ದಾರೆ. ಹೀಗಾದರೆ ಅಭಿವೃದ್ಧಿ ಕಾರ್ಯಗಳು ನಡೆಯುವುದು ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನಾವಶ್ಯಕ ಪ್ಯಾಕೇಜ್ ಟೆಂಡರ್ ರದ್ದು ಮಾಡುವಂತೆ ಹಲವು ಬಾರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಕೆಂಪಣ್ಣ ಹೇಳಿದ್ದಾರೆ. ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಶಾಸಕರು, ಸಚಿವರ ಕಡೆ ತೋರಿಸುತ್ತಿದ್ದಾರೆ ಎಂದರೆ ಈ ಸರ್ಕಾರ ಇನ್ಯಾವ ರೀತಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಅರ್ಥವಾಗುತ್ತಿದೆ.

ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದರ ಬಗ್ಗೆ ಗಮನ ಹರಿಸಬೇಕು, ತಾನು ಭ್ರಷ್ಟಾಚಾರ ವಿರೋಧಿ ಎನ್ನುವ ಸಿದ್ದರಾಮಯ್ಯ ಅವರು ಇದರ ಬಗ್ಗೆ ಗಮನ ಹರಿಸಬೇಕು. ಕೂಡಲೇ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡಲಿ. ಇದರಲ್ಲಿ ಭಾಗಿಯಾಗಿರುವ ಶಾಸಕ, ಸಚಿವರನ್ನು ವಜಾಗೊಳಿಸಿ ತಮ್ಮ ಸರ್ಕಾರ ಭ್ರಷ್ಟಾಚಾರ ವಿರೋಧಿ ಎನ್ನುವುದನ್ನು ಸಾಬೀತುಪಡಿಸಲಿ ಎಂದು ಒತ್ತಾಯಿಸಿದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ