NEWSದೇಶ-ವಿದೇಶರಾಜಕೀಯ

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ

ವಿಜಯಪಥ ಸಮಗ್ರ ಸುದ್ದಿ

ಮಧ್ಯಪ್ರದೇಶ: ಮಧ್ಯಪ್ರದೇಶದ ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್​​​​ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಇದರ ಜತೆಗೆ ಬಿಜೆಪಿಗೆ ಅವರು ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್​​​ನಲ್ಲಿ ‘ಪಕ್ಷಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್‌ನ ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂಬ್ ಅವರನ್ನು ಬಿಜೆಪಿ ಸ್ವಾಗತಿಸುತ್ತದೆ” ಎಂದು ಹಿಂದಿಯಲ್ಲಿ ವಿಜಯವರ್ಗಿಯ ಎಕ್ಸ್​​ ಮಾಡಿದ್ದಾರೆ.

ಇದೀಗ ಸೂರತ್​​ನಂತೆ ಇಲ್ಲಿಯು ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್​​​​ ನಾಯಕನ ಈ ನಡೆ ಕಾಂಗ್ರೆಸ್​​​ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.

ಶುಕ್ರವಾರ, ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಡಿಯ ಸೊರೊ ಶಾಸಕ ಪರಶುರಾಮ್ ಧಾಡಾ ಬಿಜೆಪಿಗೆ ಮತ್ತೆ ಬಂದಿದ್ದಾರೆ. ಆ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದಕ್ಕೂ ಮುನ್ನ ಏಪ್ರಿಲ್ 27 ರಂದು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಿಖ್ಖರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸಹಾಯ ಮಾಡಲು ಸರ್ಕಾರ ಕೈಗೊಂಡಿರುವ ಹಲವಾರು ಕ್ರಮಗಳನ್ನು ಉಲ್ಲೇಖಿಸಿದ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ, ಯಾರಾದರೂ ನಿಜವಾಗಿಯೂ ಈ ಸಮುದಾಯಕ್ಕಾಗಿ ಕೆಲಸ ಮಾಡಿದ್ದರೆ ಎಂದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಎಂದು ಹೇಳಿದ್ದಾರೆ.

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದೆ. ಗುಜರಾತ್‌ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.

ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದಂತಾಗಿದೆ. ನಿನ್ನೆ ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ಕೂಡ ರದ್ದಾಗಿತ್ತು. ಅದರ ನಂತರ ಎಲ್ಲ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದರು, ಹಾಗಾಗಿ ಮುಖೇಶ್​ ದಲಾಲ್ ಅವಿರೋಧವಾಗಿ ಸಂಸದನಾಗಿ ಆಯ್ಕೆಯಾಗಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ