Search By Date & Category

NEWSರಾಜಕೀಯಸಂಸ್ಕೃತಿ

ಬೆಂಗಳೂರು ಕರಗ ನಾಟಕ ಎಂದಿದ್ದ ಶಾಸಕ ಹ್ಯಾರಿಸ್ ದೇವಸ್ಥಾನದಲ್ಲೇ ಕ್ಷಮೆಯಾಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿಕೆನೀಡಿ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಇದೀಗ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆಯಾಚಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಬೆಂಗಳೂರು ಕರಗವನ್ನು ನಾಟಕ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಕ್ಷಮೆಯಾಚನೆಯೂ ಮಾಡಿದ್ದರು. ಆದರೆ ಸುಮ್ಮನಾಗದ ತಿಗಳರ ಸಮಾಜದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಮತ್ತೆ ಅಸಮಾಧಾನ ಹೊರಹಾಕುತ್ತಿದ್ದರು.

ಈ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ನೇರವಾಗಿ ತಿಗಳರ ಪೇಟೆಯಲ್ಲಿರುವ ಶ್ರೀಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿದ ಶಾಸಕ ಹ್ಯಾರಿಸ್ ಕ್ಷಮೆಯಾಚಿಸಿದ್ದಾರೆ. ದೇವರ ಮೇಲೆ ನನಗೆ ಅಪಾರ ಭಕ್ತಿ ಗೌರವವಿದೆ ಧರ್ಮಾರಾಯಸ್ವಾಮಿ ದೇವಾಲಯದಲ್ಲಿ ನಾನು ಕ್ಷಮೆ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!