NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆ ಮೂಲಕ ಕೊಟ್ಟ ಭರವಸೆ ಈಡೇರಿಸಿಯೇ ತೀರುತ್ತದೆ: ಕೆಕೆಆರ್‌ಡಿಬಿ ಅಧ್ಯಕ್ಷ ಅಜಯಸಿಂಗ್‌

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷದ ಮುಖಂಡರು ಸಾರಿಗೆ ನೌಕರರಿಗೆ ಪ್ರಣಾಳಿಕೆ ಮೂಲಕ ಕೊಟ್ಟಿರುವ ಭರವಸೆಯನ್ನು ಈಡೇರಿಸಿಯೇ ತೀರುತ್ತೇವೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಅಜಯಸಿಂಗ್‌ ಹೇಳಿದ್ದಾರೆ.

ಮಂಗಳವಾರ ಸೆ.12ರಂದು ಕಲಬುರಗಿಯ ಕೊಠಾರಿ ಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಆಯೋಜಿಸಿದ್ದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.

ಇಂದು ಈ ಸಮ್ಮೇಳನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬರಬೇಕಿತ್ತು, ಅನ್ಯ ಕಾರ್ಯದ ನಿಮಿತ್ತ ಬರಲಾಗಿಲ್ಲ. ಆದರೆ, ನೌಕರರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ. ಅದರಂತೆ 2021ರ ಮುಷ್ಕರದ ಸಮಯದಲ್ಲಿ ನೌಕರರ ವಿರುದ್ಧ ದಾಖಲಾಗಿರುವ ಪೊಲೀಸ್‌ ಪ್ರಕರಣಗಳನ್ನು ವಾಪಸ್‌ ಪಡೆಯುವುದಕ್ಕೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡಿದ್ದು ಶೀಘ್ರದಲ್ಲೇ ಅದನ್ನು ಕೂಡ ಕಾರ್ಯಗತ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಸಾರಿಗೆ ನೌಕರರಾದ ನೀವು ನಿತ್ಯ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿದ್ದು, ಕುಟುಂಬಕ್ಕೆ ಹೆಚ್ಚಿನ ಸಮಯ ಕೊಡಲಾಗುತ್ತಿಲ್ಲ ಎಂಬುವುದು ನಮಗೂ ಗೊತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಿಮಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ನಮ್ಮ ಸರ್ಕಾರ ಕಲ್ಪಿಸಿಕೊಡಲಿದೆ ಎಂದು ತಿಳಿಸಿದರು.

ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ನಮ್ಮ ಸಂಘಟನೆಯ ಧ್ಯೇಯೋದ್ದೇಶಗಳನ್ನು ಮೆಚ್ಚಿ ಸಾರಿಗೆ ಹಲವಾರು ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಇಂದು ಕೂಟವನ್ನು ಸೇರುತ್ತಿರುವುದು ಸಂತಸ ತಂದಿದೆ ಎಂದ ಅವರು, ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಮುಂದೆ ಯಾವರೀತಿಯಲ್ಲಿ ನೌಕರರು ಕೂಟದೊಂದಿಗೆ ಸ್ಪಂದಿಸುತ್ತಾರೆ ಎಂಬುದನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಸಮ್ಮೇಳನ ಆಯೋಜಿದ್ದೇವೆ ಎಂದು ಹೇಳಿದರು.

ಇನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನಮಗೆ ಕೊಟ್ಟಿದ್ದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಗಮನಸೆಳೆಯಬೇಕಿತ್ತು. ಹೀಗಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈಗ ನೂರು ದಿನ ಪೂರೈಸಿದ್ದು ಈ ನಡುವೆ ನಮಗೆ ಪ್ರಣಾಳಿಕೆ ಮೂಲಕ ಕೊಟ್ಟಿರುವಂತೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ಸರ್ಕಾರದ ಗಮನ ಸೆಳೆಯಲು ಈ ಸಮ್ಮೇಳನ ಆಯೋಜನೆ ಮಾಡಲಾಗಿದೆ ಎಂದರು.

ಇನ್ನು ನಮ್ಮ ಸಾರಿಗೆ ನೌಕರರಿಂದ, ನೌಕರರಿಗಾಗಿ ನಡೆಯುತ್ತಿರುವ ಈ ಸಮ್ಮೇಳನಕ್ಕೆ‌ ಸಾವಿರಾರು ಮಂದಿ ಸೇರಿರುವುದು ಇದೊಂದು ಐತಿಹಾಸಿಕ ಕ್ಷಣವಾಗಿದೆ. ನಿಮಗೆಲ್ಲರಿಗೂ ನಮ್ಮ ಕೂಟ ಆಭಾರಿಯಾಗಿದ್ದು, ನಿಮ್ಮ ಬೇಡಿಕೆಗಳನ್ನು ಸರ್ಕಾರ ಮತ್ತು ಆಡಳಿತ ಮಂಡಳಿ ಮುಂದಿಟ್ಟು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಒತ್ತಾಯ ಮಾಡುವುದಕ್ಕೆ ಮತ್ತೊಮ್ಮೆ ಶಕ್ತಿ ನೀಡಿದ್ದೀರಿ ಎಂದು ಹೇಳಿದರು.

ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸ್ವಯಂ ಪ್ರೇರಿತವಾಗಿ ನಾಲ್ಕು ನಿಗಮಗಳ ನೌಕರರು ಮತ್ತು ಅವರ ಕುಟುಂಬದವರು ಆಗಮಿಸಿದ್ದರು. ಇದೂ ಕೂಡ ಒಗಟ್ಟಿನಲ್ಲಿ ಬಲವಿದೆ ಅನ್ನೋದಕ್ಕೆ ಇನ್ನೊಂದು ಸಾಕ್ಷಿಯಾಯಿತು.

ಇನ್ನು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಿದ ಕಲ್ಯಾಣ ಕರ್ನಾಟಕ ಕಾರ್ಯಾಧ್ಯಕ್ಷ ಜಯರಾಮ ರಾಥೋಡ್ ಹಾಗೂ ಪದಾಧಿಕಾರಿಗಳಿಗೆ ಸಮಸ್ತ ನಾಲ್ಕು ನಿಗಮಗಳ ನೌಕರರು ತುಂಬು ಹೃದಯದ ಅಭಿನಂದನೆ ಸಲ್ಲಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು