ಮೈಸೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ರಾಜ್ಯ ಸಿದ್ದರಾಮಯ್ಯ ಅಭಿಮಾನಿ ಬಳಗ ಮಂಗಳವಾರ ಪ್ರತಿಭಟನೆ ನಡೆಯಿತು.
ನಗರದ ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ಸಿ.ಟಿ.ರವಿ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಶಾಸಕ ಸಿ.ಟಿ.ರವಿ ಅವಹೇಳನಕಾರಿ ಹೇಳಿಕೆ ಹಾಗೂ ವೈಯಕ್ತಿಕ ನಿಂದನೆ ಮಾಡಿರುವುದು ಬಿಜೆಪಿಗರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ಇನ್ನು ಸಿದ್ದರಾಮ್ಮಯ್ಯ ಅವರನ್ನು ಅತ್ಯಂತ ಕೀಳು ಪದಗಳಲ್ಲಿ ನಿಂದಿಸಿರುವ ಅವರು ಸಿದ್ದರಾಮಯ್ಯ ಅವರಲ್ಲಿ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ವಿಜಯ್‌ಕುಮಾರ್, ಸಂಘದ ಅಧ್ಯಕ್ಷ ಹಿನಕಲ್ ಪ್ರಕಾಶ್, ವಕೀಲ ಚರಣ್ ಸೇರಿದಂತೆ ಇತರರಿದ್ದರು.