Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಎಟಿಎಂನಲ್ಲಿ ಹಣ ಬಾರದಿದ್ದರೂ ಖಾತೆಯಿಂದ ದುಡ್ಡು ಕಟ್‌ – ಬ್ಯಾಂಕ್‌ಗೆ ₹2.04 ಲಕ್ಷ ದಂಡ ಹಾಕಿದ ಗ್ರಾಹಕ ನ್ಯಾಯಾಲಯ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ:  ಎಟಿಎಂನಲ್ಲಿ ಹಣ ತೆಗೆಯಲು ಹೋದ ಗ್ರಾಹಕರೊಬ್ಬರಿಗೆ ಹಣ ಬರಲಿಲ್ಲ. ಆದರೆ ಅವರ ಬ್ಯಾಂಕ್ ಖಾತೆಯಿಂದ ಕಡಿತವಾಗಿತ್ತು. ಆ ಬಳಿಕ ಸಂಬಂಧಪಟ್ಟ ಬ್ಯಾಂಕ್‌ ಗ್ರಾಹಕನಿಗೆ ಹಣ ನೀಡಲು ನಿರಾಕರಿಸಿದ್ದರ ವಿರುದ್ಧ ಗ್ರಾಹಕ ನ್ಯಾಯಾಲಯದಲ್ಲಿ ದಾವೆಹೂಡಿದ್ದರಿಂದ ಬ್ಯಾಂಕಿಗೆ ₹2.24 ಲಕ್ಷಗಳ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ಆಯೋಗ ತೀರ್ಪು ನೀಡಿದೆ.

ಹುಬ್ಬಳ್ಳಿಯ ಅಂಚಟಗೇರಿ ನಿವಾಸಿ ಮಹ್ಮದರಫಕತ್ ಅನ್ಸಾರಿ ಎಂಬುವವರು ಬಿಹಾರ ರಾಜ್ಯದ ಮುಜಾಫರಪುರ್‌ಕ್ಕೆ ಪ್ರವಾಸ ಹೋಗಿದ್ದರು. ಆ ವೇಳೆ ಅಲ್ಲಿನ ಎಚ್‌ಡಿಎಫ್‌ಸಿ ಬ್ಯಾಂಕ್‌ ಎಟಿಎಂನಲ್ಲಿ 10 ಸಾವಿರದಂತೆ ಎರಡು ಬಾರಿ ಹಣ ತೆಗೆಯಲು ಕಾರ್ಡ್ ಎಟಿಎಂ ಬಳಸಿದ್ದರು. ಆದರೆ ಎಟಿಎಂನಿಂದ ಹಣ ಬರದೇ ಇದ್ದರೂ ಅವರ ಉಳಿತಾಯ ಖಾತೆಯಿಂದ ₹20 ಸಾವಿರ ಕಡಿತವಾಗಿತ್ತು. ಈ ಬಗ್ಗೆ ಅವರು ತನ್ನ ಉಳಿತಾಯ ಖಾತೆ ಇರುವ ಹುಬ್ಬಳ್ಳಿಯ ಅಂಚಟಗೇರಿಯ ಯೂನಿಯನ್ ಬ್ಯಾಂಕ್‍ಗೆ ದೂರು ನೀಡಿದ್ದರು. ಎಟಿಎಂ ತಪ್ಪನ್ನು ಸರಿಪಡಿಸಲು ಕೋರಿದ್ದರು.

ಗ್ರಾಹಕ ನೀಡಿದ ದೂರಿನ ಆಧಾರದ ಮೇಲೆ ಯೂನಿಯನ್ ಬ್ಯಾಂಕ್, ಎಟಿಎಂ ದೋಷದಿಂದ ಬಾರದ ₹20 ಸಾವಿರವನ್ನು ತಕ್ಷಣ ದೂರುದಾರರ ಖಾತೆಗೆ ಜಮಾ ಮಾಡುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್‍ಗೆ ಪತ್ರ ವ್ಯವಹಾರ ಮಾಡಲಾಗಿತ್ತು. ಆದರೂ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಖಾತೆಗೆ ಹಣ ಜಮಾ ಆಗಲಿಲ್ಲ.

ಇದರಿಂದ ಬೇಸತ್ತ ಗ್ರಾಹಕ ಹಣ ಖಾತೆಗೆ ಜಮಾವಾಗಿಲ್ಲ, ಇದರಿಂದ ತನಗೆ ತೊಂದರೆಯಾಗಿದೆ. ಇದಕ್ಕೆಲ್ಲ ಆ ಬ್ಯಾಂಕ್‌ನಿಂದ ಸೇವಾ ನ್ಯೂನ್ಯತೆಯೇ ಕಾರಣ ರಂದು ಬ್ಯಾಂಕ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಮೆಟ್ಟಿಲೇರಿದರು.

ಗ್ರಾಹಕ ಕೊಟ್ಟ ದೂರನ್ನು ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಎಟಿಎಂ ದೋಷದಿಂದ ದೂರುದಾರನಿಗೆ ಹಣ ಬಂದಿಲ್ಲ. ಕಾರಣ ಆ ಹಣ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿಯೇ ಉಳಿದಿದೆ.

ಈ ಬಗ್ಗೆ ಯೂನಿಯನ್ ಬ್ಯಾಂಕ್ ಶಾಖಾ ವ್ಯವಸ್ಥಾಪಕರು 2019ರಲ್ಲಿ ಎರಡು ಬಾರಿ ಬ್ಯಾಂಕ್‌ನವರನ್ನು ಸಂಪರ್ಕಿಸಿ ದೂರುದಾರರ ಹಣವನ್ನು ಅವರ ಖಾತೆಗೆ ಹಿಂದಿರುಗಿಸಲು ಕೋರಿದ್ದರು. ಆದರೂ ಬ್ಯಾಂಕ್‌ನವರು ಘಟನೆ ನಡೆದ 17/01/2019 ರಿಂದ ಈ ವರೆಗೂ ಅಂದರೆ ಸುಮಾರು 4 ವರ್ಷ ಕಾಲ ದೂರುದಾರನ ಖಾತೆಗೆ ಹಣ ಜಮಾ ಮಾಡಲೇ ಇಲ್ಲ.

ಈ ರೀತಿ ಎಟಿಎಂ ದೋಷದಿಂದ ಹಣ ಬಾರದ ಪ್ರಕರಣಗಳಲ್ಲಿ 6 ದಿನದೊಳಗಾಗಿ ಸಂಬಂಧಿಸಿದ ಬ್ಯಾಂಕ್‌ನವರು ಕ್ರಮ ಕೈಗೊಂಡು ಗ್ರಾಹಕನ ಖಾತೆಗೆ ಹಣ ಜಮಾ ಮಾಡಬೇಕು. ತಪ್ಪಿದ್ದಲ್ಲಿ 7ನೇ ದಿನದಿಂದ ಜಮಾ ಆಗುವವರೆಗೆ ಪ್ರತಿ ದಿನ ₹100 ದಂಡ ಕೊಡಬೇಕು ಎಂಬ ಸುತ್ತೋಲೆ ಇದೆ. ಆದ್ದರಿಂದ 17/01/2019 ರಿಂದ ಈವರೆಗೆ ಸುಮಾರು 4 ವರ್ಷಗಳ ಕಾಲ ಹಣ ದೂರುದಾರರ ಖಾತೆಗೆ ಜಮಾ ಮಾಡದ ಕಾರಣ ಬ್ಯಾಂಕ್‌ ಸಿಬ್ಬಂದಿ ಕರ್ತವ್ಯ ಲೋಪ ಎಸಗಿ ಸೇವಾ ನ್ಯೂನ್ಯತೆ ಮಾಡಿದ್ದಾರೆ ಎಂದು ಜಿಲ್ಲಾ ಗ್ರಾಹಕರ ಆಯೋಗ ಈ ತೀರ್ಪು ನೀಡಿದೆ.

17/01/2019 ರಂದು ಈ ಘಟನೆ ನಡೆದಿದ್ದು ಅದಾದ 6 ದಿನದ ನಂತರ ಅಂದರೆ 23/01/2019 ರಿಂದ ಈ ತೀರ್ಪು ನೀಡಿದ 3/01/2023ರ ವರೆಗೆ 1441 ದಿನಗಳವರೆಗೆ ಪ್ರತಿ ದಿನಕ್ಕೆ 100 ರೂಪಾಯಿಯಂತೆ ಲೆಕ್ಕಾ ಹಾಕಿ ಎಚ್‌ಡಿಎಫ್‌ಸಿ ಬ್ಯಾಂಕ್‌ನವರು ದೂರುದಾರನಿಗೆ ₹1,44,100 ದಂಡ.

₹20 ಸಾವಿರ ಎಟಿಎಂ ಹಣ ಮತ್ತು ದೂರುದಾರನಿಗೆ ಆಗಿರುವ ತೊಂದರೆ ಮತ್ತು ಮಾನಸಿಕ ಹಿಂಸೆಗೆ ₹ 50,000 ದಂಡ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ₹10,000 ಸೇರಿ ಒಟ್ಟು ₹2,24,100ರನ್ನು ಶೇ.8 ರಂತೆ ಬಡ್ಡಿ ಜತೆಗೆ ನೀಡುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ಆದೇಶಿಸಲಾಗಿದೆ.

[wp-rss-aggregator limit=”3″]

Leave a Reply

error: Content is protected !!
LATEST
ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ...