NEWSನಮ್ಮಜಿಲ್ಲೆನಮ್ಮರಾಜ್ಯ

ಸಿರಿಧಾನ್ಯಗಳ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ: ಸಚಿವ ಮುನಿಯಪ್ಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳ-2024 ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು.

ಇಂದಿನ ದಿನಗಳಲ್ಲಿ ಜನರು ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಇದರಿಂದ ಆರೋಗ್ಯ ಕೆಡುತ್ತಿದೆ. ನಾವು ತಿನ್ನುವ ಆಹಾರ ಗುಣಮಟ್ಟದಾಗಿರಬೇಕು. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನ ಹೊಳೆ ನೀರು, ಹೆಚ್.ಎನ್ ವ್ಯಾಲಿ ನೀರು, ಮೂರನೇ ಹಂತದ ಶುದ್ಧೀಕರಣ ಕೆ.ಸಿ ವ್ಯಾಲಿ ನೀರನ್ನು ತರಲಾಗುವುದು. ಕೃಷಿಗೆ ಹೆಚ್ಚಿನ ಉತ್ತೇಜನ ನೀಡಿ ಗುಣಮಟ್ಟದ ಆಹಾರ ಬೆಳೆಯಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಮಾತನಾಡಿ ಸಿರಿಧಾನ್ಯಗಳನ್ನು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ, ಲಾಭದಾಯಕ ಬೆಳೆಗಳ ಬಗ್ಗೆ ರೈತರು ಹೆಚ್ಚಿನ ಗಮನವಹಿಸುತ್ತಾರೆ, ಸರ್ಕಾರದಿಂದ ವಿವಿಧ ಯೋಜನೆಗಳ ಮೂಲಕ ಮಾಹಿತಿ ನೀಡಿ ಸಿರಿಧಾನ್ಯಗಳಗಳನ್ನು ಬೆಳೆಯಲು ಪ್ರೋತ್ಸಾಹಿಸಿ ಬೆಂಬಲಿಸಬೇಕು ಎಂದು ಹೇಳಿದರು.

ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ದೇವನಹಳ್ಳಿ ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಕೃಷಿ ಇಲಾಖೆ ವತಿಯಿಂದ ಆಯ್ದ ರೈತರಿಗೆ ಉದಯೋನ್ಮುಖ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ, ಉಪ ನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ರೇಷ್ಮೆ ಇಲಾಖೆ ನಿರ್ದೇಶಕ ಪ್ರಭಾಕರ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್ ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ