NEWSನಮ್ಮಜಿಲ್ಲೆ

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರ ಸಂಪರ್ಕಿಸಿ: ಡಿಸಿ ಡಾ. ಅನುರಾಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ತಿಳಿಸಿದ್ದಾರೆ‌.

ಪ್ರಸ್ತುತ ಕೊಲ್ಲಿ ರಾಷ್ಟ್ರದ ಯುದ್ದದ ಪರಿಣಾಮವಾಗಿ ಉದ್ಬವಿಸಿರುವ ಎಲ್ಪಿಜಿ ಸರಬರಾಜು ಬಗೆಗಿನ ಗೊಂದಲ ಬಗೆಹರಿಸಲು ರಾಜ್ಯ ಸರ್ಕಾರವು ತೈಲ ಕಂಪನಿ ಅಧಿಕಾರಿಗಳೊಂದಿಗೆ IOC/BPC/HPC ಸಭೆ ನಡೆಸಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಇಲ್ಲದ ಬಗ್ಗೆ ತೈಲ ಕಂಪನಿಗಳಿಂದ ಖಾತ್ರಿ ಪಡಿಸಿಕೊಂಡಿದೆ.

ಆಯಿಲ್ ಕಂಪನಿಗಳಿಂದ ಜಿಲ್ಲೆಗೆ ಅಡುಗೆ ಅನಿಲ ಸರಬರಾಜು ಪರಿಸ್ಥಿತಿಗನುಗುಣವಾಗಿ ಅಡುಗೆ ಅನಿಲ ಬಳಕೆ ಮಿತಿಗೊಳಿಸುವ ಬಗ್ಗೆ ಸಾರ್ವಜನಿಕರು,ಗ್ರಾಹಕರು,ಸಂಘ ಸಂಸ್ಥೆಗಳು ಇರತರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೆನೆಂದರೆ ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರ್ರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶಕಲ್ಪಿಸಲಾಗಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಡಿಸಿ ಕೋರಿದ್ದಾರೆ.

ಗ್ಯಾಸ್ ಸರಬರಾಜುನಲ್ಲಿ ಏನಾದರೂ ಸಮಸ್ಯೆ ಉಂಟಾದಲ್ಲಿ ಆಹಾರ ನೀರಿಕ್ಷಕರು/ಶಿರಸ್ತೇದಾರ್ ಅವರ ದೂರವಾಣಿ ಸಂಖ್ಯೆಗಳು ದೇವನಹಳ್ಳಿ-9449269001, ದೊಡ್ಡಬಳ್ಳಾಪುರ-9483482766, ನೆಲಮಂಗಲ-9036434552, ಹೊಸಕೋಟೆ-9902805563 ಸಂಪರ್ಕಿಸಬಹುದಾಗಿದೆ.

ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ಧೃಡಪಡಿಸಿ ಎಂದಿನಂತೆ ಎಲ್ಪಿಜಿ ವಿತರಕರು ಗ್ರಾಹಕರಿಗೆ ಮನೆಬಾಗಿಲಿಗೆ ಸರಬರಾಜು ಮಾಡುತ್ತಾರೆ. ಅಲ್ಲದೇ ಜಿಲ್ಲೆಯ ಎಲ್ಲಾ ಎಲ್ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿರುತ್ತದೆ. ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ವಿನಂತಿಸಲಾಗಿದೆ.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ 1955 Petroleum Products(Maintenace of Production, Storage and Supply) Order 1999 and LPG Control Order 2000 2000 ಸಂಬAಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!