CrimeNEWSನಮ್ಮರಾಜ್ಯ

ಅಡುಗೆ ಅನಿಲ ಸ್ಫೋಟ: ಮಲಗಿದ್ದ ಮೂವರು ಮಕ್ಕಳು ಸೇರಿ ಐವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿಯ ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಒಂದೇ ಕುಂಟುಂಬದ ಐವರಿಗೆ ಶೇ.90ರಷ್ಟು ಸುಟ್ಟ ಗಾಯಗಳಿಗೆ ತುತ್ತಾಗಿದ್ದು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ (28) ಹಾಗೂ ಮಕ್ಕಳಾದ ಹಿರದ್ (12), ಪ್ರಶಾಂತ್ (06), ಅನಿತಾ (8) ಈ ಐವರು ಗಂಭೀರ ಗಾಯಗೊಂಡಿದ್ದಾರೆ. ತಡರಾತ್ರಿ ಗ್ಯಾಸ್‌ ಲೀಕ್‌ ಆಗಿ, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ಈ ವೇಳೆ ನಿದ್ದೆ ಮಾಡುತ್ತಿದ್ದ ಈ ಐವರಿಗೆ ಗಂಭೀರವಾದ ಸುಟ್ಟು ಗಾಯವಾಗಿವೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ನೇಪಾಳ ಮೂಲದ ಕುಟುಂಬವು ಬಾಡಿಗೆ ಮನೆಯಲ್ಲಿ ವಾಸವಿತ್ತು.

ಈ ಘಟನೆ ಸಂಬಂಧ ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟೆಕ್ನೋವಾ ಟೇಪ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿರುವ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಟೆಕ್ನೋವಾ ಟೇಪ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಿಂದಾಗಿ ಕಾಟಾನ್ ಬಾಕ್ಸ್ ಮತ್ತು ಟೆಪ್ಸ್ ಎಲ್ಲವೂ ಸುಟ್ಟು ಕರಕಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ನಾಲ್ಕು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಲಕ್ಷಾಂತರ ರೂ.ಗಳ ಕಚ್ಚಾವಸ್ತುಗಳು ಬೆಂಕಿಗಾಹುತಿ ಆಗಿವೆ.

ಉಡುಪಿಯಲ್ಲೂ ಅಗ್ನಿ ಅವಘಡ: ಉಡುಪಿಯ ಪಾದೂರು ಮರದ ಹುಡಿ ಗೋಡೌನ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಕಾಪು ತಾಲೂಕಿನ ಮಾದೂರಿನಲ್ಲಿರುವ ಮರದಹುಡಿ ಸಂಗ್ರಹದ ಘಟಕದಲ್ಲಿ ಘಟನೆ ನಡೆದಿದೆ.

ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳದವರಿಂದ ಕಾರ್ಯಾಚರಣೆ ನಡೆಸಿದ್ದರು, ಮರದ ಹುಡುಗಿ ತಗಳಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರಿಂದ ಅವಘಡ ತಪ್ಪಿದೆ.

ಬಾಗಲಕೋಟೆಯಲ್ಲೂ ಸಿಲಿಂಡರ್‌ ಸ್ಫೋಟ; ಸುಟ್ಟು ಭಸ್ಮವಾದ ಫ್ಯಾಕ್ಟರಿ- ಸಿಲಿಂಡರ್ ಸ್ಫೋಟಕ್ಕೆ ಸ್ವೀಟ್, ಬಡಂಗ್ ತಯಾರಿಕ ಫ್ಯಾಕ್ಟರಿ ಸುಟ್ಟು ಭಸ್ಮವಾಗಿದೆ. ಬಾಗಲಕೋಟೆಯ ರಬಕವಿ ನಗರದದಲ್ಲಿ ಘಟನೆ ನಡೆದಿದೆ. ರಬಕವಿಯ ಕಂಟಿ ಬಸವೇಶ್ವರ ದೇವಾಲಯ ಹತ್ತಿರ ಇರುವ ಬಡಂಗ್ ಫ್ಯಾಕ್ಟರಿಯಲ್ಲಿ ಬುಧವಾರ ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮಹಮ್ಮದ್ ಹುಸೇನ್ ಗೋಕಾಕ್ ಎಂಬುವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡದಿಂದಾಗಿ ಅಂದಾಜು 50-60 ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಯಾಗಿರು ಸಾಧ್ಯತೆ ಇದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ