NEWS

ಮಾಂಡೌಸ್ ಎಫೆಕ್ಟ್‌ಗೆ ಬೆಂಗಳೂರು ಕೂಲ್ ಕೂಲ್- ಇನ್ನೂ ಮೂರು ದಿನ ಬೀಳಲಿದೆ ಮಳೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿನ ಜತೆ ಜತೆಗೆ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿಗೂ ಮಾಂಡೌಸ್ ಎಫೆಕ್ಟ್‌ ತಟ್ಟಿದ್ದು, ಬೆಂಗಳೂರು ಕೂಲ್ ಕೂಲ್ ಆಗಿದೆ.

ಈಗಾಗಲೇ 3 ದಿನದಿಂದ ಬಿಟ್ಟು ಬಿಡದೇ ವರುಣ ಮೌನವಾಗಿಯೇ ಬರುತ್ತಿದ್ದು, ಸುರಿಯುತ್ತಿರುವ ತುಂತುರು ಮಳೆಯು ಇನ್ನೂ ಮುಂದುವರಿದಿದೆ. ಇಂದೂ ಕೂಡ ಜಿಟಿಜಿಟಿ ಮಳೆಯು ದಿನವೀಡಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಜಾನೆಯಿಂದಲೇ ದಟ್ಟ ಮಂಜು ಕವಿತ ವಾತಾವರಣವಿದ್ದು, ಬೆಂಗಳೂರಿನಲ್ಲಿ ತಾಪಮಾನ 18 ಡಿಗ್ರಿ ಸೆಲ್ಸಿಯಸ್’ಗೆ ಇಳಿದಿದೆ.

ಇನ್ನು ಬೆಂಗಳೂರು ಸೇರಿದಂತೆ ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಗಿಂತ‌ ಚಳಿಯೇ ಹೆಚ್ಚು ಕಾಡುತ್ತಿದೆ. ಚಂಡಮಾರುತದ ಗಾಳಿ ಕೆಳಭಾಗದಲ್ಲಿ ಬೀಸುತ್ತಿದ್ದು, ಚಳಿ ಜೋರಾಗಲು ಪ್ರಮುಖ ಕಾರಣವಾಗಿದೆ.

ಇನ್ನು ಚಂಡಮಾರುತದ ಪರಿಣಾಮ ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರಿಗರಿಗೆ ಮಳೆ ಮತ್ತು ಚಳಿಯ ಅಬ್ಬರಕ್ಕೆ ಥಂಡ ಹೊಡೆದಂತಾಗಿದೆ. ಹೀಗಾಗಿ ಹೊರಗಡೆ ರೌಂಡ್‌ ಹಾಕುವ ಯೋಜನೆ ಹಾಕಿಕೊಂಡಿದ್ದರು ಬೆಚ್ಚನೆಯ ಉಡುಪುಗಳು ಮತ್ತು ರಗ್ಗುಗಳನ್ನು ಹೊದದ್ದಿಕೊಂಡಿ ಮನೆಯಿಂದ ಹೊರಬಾರದೆ ಕುಳಿತ್ತಿದ್ದಾರೆ. ಇನ್ನೂ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಸೋಮವಾರ ಕಚೇರಿ ಇತರ ಕೆಲಸಕ್ಕೆ ಹೋಗುವುದು ಹೇಗೆ ಎಂಬ ಯೋಚನೆಯಲ್ಲಿದ್ದಾರೆ.

ಚಂಡಮಾರುತದ ಎಫೆಕ್ಟ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆಯಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಕರಾವಳಿ, ಉತ್ತರ ಒಳನಾಡಿಗೆ ಸಾಧಾರಣ ಮಳೆ ಮುನ್ಸೂಚನೆಯಿದೆ. ಮುಂದಿನ 24 ಗಂಟೆಗಳ‌ ಕಾಲ ಕವಿದ ವಾತಾವರಣವ ಇರಲಿದೆ. ಗಾಳಿಯ ಪ್ರಮಾಣ 65 ರಿಂದ 75 ಕಿಮೀ‌ ವೇಗದಲ್ಲಿ ಬೀಸುತ್ತಿದ್ದು ಹೀಗಾಗಿ ಡಿಸೆಂಬರ್ 14 ರವರೆಗೂ ಮಳೆ ಮುಂದುವರಿಯಲಿದೆ ಎಂದು ಹಲವಾಮಾಣ ಇಲಾಖೆ ಮಾಹಿತಿ ನೀಡಿದೆ.

ಸದ್ಯ ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 18ಡಿಗ್ರಿ ಸೆಲ್ಸಿಯಸ್ ಇದ್ದು ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇದೆ. ಹೀಗಾಗಿ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...