ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 31,830 ಪ್ರಕರಣ ಪತ್ತೆಯಾಗಿದ್ದು 180 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 31,830 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 301899 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14,807ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಕುಗ್ಗುತ್ತಿದ್ದು ಇಂದು 10793 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 13,68,945 ಕೊರೊನಾ ಸೋಂಕಿತರಲ್ಲಿ 11,08,050 ಮಂದಿ ಗುಣಮುಖರಾಗಿದ್ದು ಇನ್ನು3,01,899 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 2,063 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 17,550 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 6,87,751 ಕ್ಕೆ ಏರಿಕೆಯಾಗಿದೆ. ಇಂದು 97 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 6,002 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2,06,223 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ನಲ್ಲಿ ತಿಳಿಸಿದೆ.