ಬೆಂಗಳೂರು: ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5532 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 134819 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 84 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2504 ಕ್ಕೆ (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.
ಈ ನಡುವೆ, ಇಂದು ರಾಜ್ಯದಲ್ಲಿ 4077 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 57725 ಕ್ಕೇರಿದಂತಾಗಿದೆ. ಇನ್ನು 74590 ಸಕ್ರಿಯ ಪ್ರಕರಣಗಳಿವೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2105 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 59501 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 21 ಮಂದಿ ಬಲಿಯಾಗಿದ್ದಾರೆ.
ಇಂದಿನ 02/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/8LDLdr0NnN pic.twitter.com/eHwRy2qPle
— K'taka Health Dept (@DHFWKA) August 2, 2020