ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು.
ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್ ಅವರು ಗೂಗುಚ್ಛ ನೀಡುವ ಮೂಲಕ ನೂತನ ಎಂಡಿ ಅವರನ್ನು ಸ್ವಾಗತಿಸಿ ತಮ್ಮ ಅಧಿಕಾರಿರನ್ನು ಹಸ್ತಾಂತರಿಸಿದರು.
ಕಳೆದ ಮೂರು ವರ್ಷದಿಂದ ನಿಗಮದ ಎಂಡಿಯಾಗಿದ್ದ ವಿ.ಅನ್ಬುಕುಮಾರ್ ಅವರನ್ನು ಇದೇ ಜೂನ್ 2ರಂದು ವರ್ಗಾವಣೆ ಮಾಡಲಾಗಿತ್ತು. ಆ ಬಳಿಕ ಬಿಎಂಟಿಸಿ ಎಂಡಿ ಅವರನ್ನು ಪ್ರಭಾರವಾಗಿ ನೇಮಕ ಮಾಡಲಾಗಿತ್ತು. ಹೀಗಾಗಿ ಇಂದು ಅಕ್ರಮ್ ಪಾಷ ಅವರನ್ನು ಎಂಡಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿದ ಹಿನ್ನೆಲೆಯಲ್ಲಿ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನೌಕರರಿಗೆ 2020ರ ಜನವರಿ ಒಂದರಿಂದ ಅನ್ವಯವಾಗುವಂತೆ 2023ರ ಮಾರ್ಚ್ನಲ್ಲಿ ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ವೇತನ ಹೆಚ್ಚಳವಾಗಬೇಕಿದ್ದು, ಅದು ಈವರೆಗೂ ಆಗಿಲ್ಲ. ಈ ಎಲ್ಲವನ್ನು ಸರ್ಕಾರದ ಜತೆ ಮಾತನಾಡಿ ಕೊಡಿಸುವ ಗರುತರವಾದ ಜವಾಬ್ದಾರಿ ನೂತನ ಎಂಡಿ ಅಕ್ರಮ್ ಪಾಷ ಅವರ ಮೇಲಿದೆ.
ಈ ಬಗ್ಗೆ ಸರ್ಕಾರದ ಜತೆ ಮಾತನಾಡಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳನ್ನು ಯಾವರೀತಿ ಕೊಡಿಸುತ್ತಾರೋ ಎಂಬ ಕುತೂಹಲ ಕೂಡ ನಾಲ್ಕೂ ನಿಗಮದ ನೌಕರರದ್ದಾಗಿದೆ. ಈ ಎಲ್ಲದರ ಜತೆಗೆ ಡಿಪೋಗಳ ಮಟ್ಟದಲ್ಲಿ ಚಾಲನಾ ಸಿಬ್ಬಂದಿ ಸೇರಿದಂತೆ ಇತರ ನೌಕರರಿಗೆ ಆಗುತ್ತಿರುವ ಮಾನಸಿಕ ಕಿರುಕುಳ ಹಾಗೂ ಲಂಚಾವತಾರಕ್ಕೂ ಕಡಿವಾಣ ಹಾಕುವ ಜಾಣ್ಮೆಯನ್ನು ನೂತನ ಎಂಡಿಯವರು ತೋರಿಸಬೇಕಿದೆ.
ಇನ್ನು ಈ ಹಿಂದೆ ಇದ್ದ ಎಂಡಿ ವಿ.ಅನ್ಬುಕುಮಾರ್ ಅವರು ನೌಕರರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಿರುವ ಯೋಜನೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಗುರುತರ ಆರೋಪದಡಿ ಲೋಕಾಯುಕ್ತಕ್ಕೆ ಕೆಆರ್ಎಸ್ ಪಕ್ಷದ ಮುಖಂಡರು 2025ರ ಏಪ್ರಿಲ್ನಲ್ಲಿ ದೂರು ನೀಡಿದ್ದರು. ಈ ಹಿನ್ನೆಯಲ್ಲಿ ಅವರನ್ನು ಸರ್ಕಾರ ರಜೆ ಮೇಲೆ ಕಳುಹಿಸಿ ಬಳಿಕ ವರ್ಗಾವಣೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ತಾವು ಸ್ವಚ್ಛ ಮನಸ್ಸಿನಿಂದ ಹಾಗೂ ಶುದ್ಧವಾದ ನಡೆಯಿಂದ ನೌಕರರಿಗೆ ಸರ್ಕಾರದಿಂದ ಹಾಗೂ ಸಂಸ್ಥೆಯಿಂದ ಸಿಗಬೇಕಿರುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಕೊಡಿಸಬೇಕು ಎಂಬುವುದು ವಿಜಯಪಥದ ಕಳಕಳಿ.
Related


You Might Also Like
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...