ಬೆಂಗಳೂರು: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕೃಷಿ ಅಧಿಕಾರಿಗಳಿಗೆ ಲಂಚ ಕೊಡುವಂತೆ ಪೀಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಲಿಖಿತವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಮಂಡ್ಯ, ಮಳ್ಳವಳ್ಳಿ, ಕೆ.ಆರ್.ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ನಾವು ಕುಟುಂಬ ಸಹಿತ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜತೆಗಿನ ಪತ್ರವೊಂದನ್ನು ಕೊಟ್ಟಿದ್ದಾರೆ.
ಸಚಿವರ ವಿರುದ್ಧದ ದೂರಿನ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಇದನ್ನು ಗಂಭೀರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಮಧ್ಯೆ ದೂರಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಚಲುವರಾಯಸ್ವಾಮಿ, ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಇಲ್ಲಿ ಕಳ್ಳ ನಾನು ಕಳ್ಳತನ ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತಾನೆಯೇ ಇಂಥ ಭ್ರಷ್ಟ ಸಸಚಿವರಿಂದ ನಿಷ್ಠಾವಂತ ಅಧಿಕಾರಿಗಳು ಸರ್ಕಾರದಿಂದ ಪಡೆಯುತ್ತಿರುವ ವೇತನದ ಜತೆಗೆ ಲಂಚದ ಕೂಪಕ್ಕೆ ಸಿಲುಕುತ್ತಿದ್ದಾರೆ.
ಇಂಥ ಭ್ರಷ್ಟ ಸಚಿವರನ್ನು ನಿಜವಾಗಲು ಸಿಎಂ ಸಿದ್ದರಾಮಯ್ಯ ಧೈರ್ಯವಿದ್ದರೆ ಕೂಡಲೇ ಸಂಪುಟದಿಂದ ಕಿತ್ತುಹಾಕಬೇಕು. ಬೇಲಿಯೇ ಎದ್ದು ಹೊಲ ಮೇಯ್ದರೆ ಕೇಳುವವರು ಯಾರು ಎಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಇನ್ನು ಅಧಿಕಾರಿಗಳು ಲಂಚ ತೆಗೆದುಕೊಂಡರೆ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕಾದ ಸ್ಥಾನದಲ್ಲಿರುವ ಈ ವ್ಯಕ್ತಿ ಈ ರೀತಿ ಅಧಿಕಾರಿಗಳಿಗೆ ಲಂಚದ ಬೇಡಿಕೆ ಇಟ್ಟರೆ ಅವರು ಯಾರ ಬಳಿ ವಸೂಲಿ ಮಾಡಿಕೊಡಬೇಕು. ರೈತರ ಬಳಿ ತಾನೇ. ಒಂದು ವೇಳೆ ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದರೆ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಈತನೆ ಅಮಾನತು ಮಾಡಲು ಶಿಫಾರಸು ಮಾಡುತ್ತೇನೆ. ಇಂಥವರು ನಮ್ಮ ರಾಜ್ಯದ ಸವರು ಎಂದು ನಾಗರಿಕರು ಛೀಮಾರಿ ಹಾಕುತ್ತಿದ್ದಾರೆ.