Please assign a menu to the primary menu location under menu

CrimeNEWSನಮ್ಮರಾಜ್ಯ

ಹುದ್ದೆಗೆ ₹20-30 ಲಕ್ಷ ಲಂಚ ಪಡೆದ ಭ್ರಷ್ಟ ಶಾಸಕ ನಂಜೇಗೌಡ ರಾಜೀನಾಮೆ ನೀಡಬೇಕು: ಎಎಪಿಯ ಜಗದೀಶ್ ವಿ. ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ‌ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ವಿ. ಸದಂ, ಭ್ರಷ್ಟಾಚಾರ ಮುಕ್ತ ಆಡಳಿತ ಕೊಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಮಾತಿಗೆ ತಪ್ಪಿದೆ. ಕಾಂಗ್ರೆಸ್ ಶಾಸಕರೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಆರೋಪಿಸಿದರು.

ಮಾಲೂರು ಶಾಸಕ ನಂಜೇಗೌಡ ಅವರು ಕೋಚಿಮುಲ್ ನೇಮಕಾತಿಯಲ್ಲಿ ನೇರವಾಗಿ ಅಕ್ರಮದಲ್ಲಿ ತೊಡಗಿರುವ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರವು ಶಾಸಕನ ರಕ್ಷಣೆಗೆ ಧಾವಿಸದೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಮತ್ತು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ವಿಚಾರದಲ್ಲಿ ಅಗತ್ಯ ತನಿಖೆಯಾಗಿ ಸತ್ಯಾಂಶ ಹೊರಬರಬೇಕಿದೆ ಎಂದು ಆಗ್ರಹಿಸಿದರು.

ಇ.ಡಿ ಅಧಿಕಾರಿಗಳೇ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರು ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಹೇಳಿದ್ದು, ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಶಾಸಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಎಪಿ ಈ ವಿಚಾರವಾಗಿ ಹೋರಾಟ ನಡೆಸಲಿದೆ. ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಸರ್ಕಾರ ನೀಡಬೇಕಿದೆ. ಭ್ರಷ್ಟಾಚಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್ ವಿ ಸದಂ ಒತ್ತಾಯಿಸಿದರು.

ಕೋಚಿಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರತಿ ಹುದ್ದೆಯು 20 ಲಕ್ಷದಿಂದ 30 ಲಕ್ಷ ರೂಪಾಯಿಗೆ ಮಾರಾಟವಾಗಿರುವುದು ಪತ್ತೆಯಾಗಿದೆ. ನೇಮಕಾತಿ ಸಮಿತಿಯು ಸಂದರ್ಶನ ಪ್ರಕ್ರಿಯೆಯನ್ನು ತಿರುಚಿರುವುದಷ್ಟೇ ಅಲ್ಲದೆ ಅಂತಿಮ ಪಟ್ಟಿಯನ್ನು ಸಾರ್ವಜನಿಕಗೊಳಿಸುವ ಮುನ್ನವೇ ತಮಗೆ ಬೇಕಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ತರಬೇತಿಗೆ ಕಳುಹಿಸಿದ್ದಾರೆ. ಇದನ್ನೆಲ್ಲಾ ಗಮನಿಸಿದರೆ ಇದರ ಹಿಂದೆ ಇನ್ನು ಯಾರೆಲ್ಲಾ ಇದ್ದಾರೆ ಎನ್ನುವ ಬಗ್ಗೆ ಗುಮಾನಿ ಮೂಡುತ್ತದೆ ಎಂದರು.

ಇನ್ನು ಹೀಗಾಗಿ, ಈ ವಿಚಾರದಲ್ಲಿ ವಿಳಂಬ ಮಾಡದೆ ನಿಷ್ಪಕ್ಷಪಾತ ತನಿಖೆಗೆ ಆದ್ಯತೆ ನೀಡಬೇಕಿದೆ. ಸರ್ಕಾರವು ಯಾವುದೇ ಮುಲಾಜಿಲ್ಲದೆಯೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಾಮಾಣಿಕ ಉದ್ಯೋಗಾಂಕ್ಷಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ತಿಳಿಸಿದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...