NEWSನಮ್ಮಜಿಲ್ಲೆನಮ್ಮರಾಜ್ಯ

ದಸರಾಗೆ ಕ್ಷಣಗಣನೆ: ಜಂಬೂ ಸವಾರಿ ಜತೆಗೆ ಸಾಗಲಿವೆ 58 ಸ್ತಬ್ಧಚಿತ್ರಗಳು- ಭಾಗಿಯಾಗಲಿವೆ 150ಕ್ಕೂ ಹೆಚ್ಚು ಕಲಾತಂಡಗಳು

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮೆರುಗು ಹೆಚ್ಚಿದ್ದು, ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಜಂಬೂಸವಾರಿ ಇಂದು ಸಂಜೆ ನಡೆಯಲಿದ್ದು, ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಇಲಾಖೆಗಳು 31ಜಿಲ್ಲೆಗಳಿಂದ 58 ಸ್ತಬ್ಧಚಿತ್ರಗಳು ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಲಿವೆ.

ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಸಾಗಲು ಸಿದ್ಧಗೊಂಡಿವೆ. 31 ಜಿಲ್ಲೆಗಳು ಹಾಗೂ ವಿವಿಧ ಇಲಾಖೆಗಳು ಸೇರಿದಂತೆ 58 ಟ್ಯಾಬ್ಲೋಗಳು ಅಂಬಾವಿಲಾಸ ಅರಮನೆಯ ಆವರಣದಲ್ಲಿ ಸಿದ್ಧಗೊಂಡಿವೆ.

ಟ್ಯಾಬ್ಲೋಗಳ ಮೂಲಕ ತಮ್ಮ ಸ್ಥಳೀಯ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಯೋಜನೆಗಳು ಸೇರಿದಂತೆ ಹಲವು ಮಹತ್ವ ಸಾರಲಿವೆ. ಈ ಎಲ್ಲ ಸ್ತಬ್ಧಚಿತ್ರಗಳು ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಸಿದ್ಧವಾಗಿ ನಿಂತಿವೆ.

ಜತೆಗೆ ಮೆರವಣಿಗೆಯಲ್ಲಿ 150ಕ್ಕೂ ಅಧಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ಇನ್ನೂ ಜಂಬೂ ಸವಾರಿ ಹಿನ್ನೆಲೆ ಮೈಸೂರಿನಾದ್ಯಂತ ಬಿಗಿ ಪೊಲೀಸ್‌ ಭದ್ರತೆ ಮಾಡಿಕೊಳ್ಳಲಾಗಿದ್ದು, ವಿವಿಧ ಜಿಲ್ಲೆಗಳಿಂದ ಪೊಲೀಸ್ ಪಡೆಯನ್ನು ಕರೆಸಿಕೊಳ್ಳಲಾಗಿದೆ.

ಇನ್ನು ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದು, ಚಿತ್ರದುರ್ಗ, ಚಿಕ್ಕಮಗಳೂರು, ಕೊಪ್ಪಳ, ಬೆಳಗಾವಿಯಿಂದ ಗರುಡ ಪಡೆ, ಶ್ವಾನದಳ, ಬಾಂಬ್ ಸ್ಕ್ವಾಡ್ ಆಗಮಿಸಿದೆ. ಜತೆಗೆ ಜಂಬೂಸವಾರಿ ಸಾಗುವ ಮಾರ್ಗದ ಉದ್ದಕ್ಕೂ ಭಾರಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದ್ದು, ಅರಮನೆ ಸುತ್ತಮುತ್ತ ಹಾಗೂ ಅಂಬಾರಿ ಸಾಗುವ ಮಾರ್ಗದಲ್ಲಿ ಹೆಚ್ಚುವರಿ ಸಿಸಿಟಿವಿ ನಿಯೋಜನೆ ಮಾಡಲಾಗಿದೆ. ಬನ್ನಿಮಂಟಪ ಸೇರಿದಂತೆ ನಗರದ ರಾಜಮಾರ್ಗಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.

Advertisement
Deva
the authorDeva

Leave a Reply

error: Content is protected !!