NEWSದೇಶ-ವಿದೇಶನಮ್ಮರಾಜ್ಯ

ನಾಳೆ ಲೋಕಸಭಾ ಚುನಾವಣೆ ಮತ ಎಣಿಕೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ – ಡಿಸಿ ವಿನಾಶ್​ ಮೆನನ್

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ನಾಳೆ ಅಂದರೆ ಜೂನ್ 4ರಂದು ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯಲಿದ್ದು ಈ ಹಿನ್ನೆಲೆ ರಾಮನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಅವಿನಾಶ್​ ಮೆನನ್ ಹೇಳಿದ್ದಾರೆ.

ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಹೀಗಾಗಿ ಮತ ಎಣಿಕೆ ಕಾರ್ಯಕ್ಕೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮಂಗಳವಾರ ಬೆಳಗ್ಗೆ 6ಕ್ಕೆ ಸ್ಟ್ರಾಂಗ್ ರೂಂ ಓಪನ್ ಮಾಡಿ ಬೆಳಗ್ಗೆ 8 ಗಂಟೆಯಿಂದ ಎಣಿಕೆ ಕಾರ್ಯ ಆರಂಭವಾಗಲಿದೆ. ಎಣಿಕಾ ಕೇಂದ್ರದ 18 ಕೊಠಡಿಗಳಲ್ಲಿ 137 ಟೇಬಲ್​ಗಳಲ್ಲಿ ಎಣಿಕೆ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

22 ಸುತ್ತುಗಳಲ್ಲಿ ಎಣಿಕಾ ಕಾರ್ಯ ನಡೆಸಲಿರುವ ಸಿಬ್ಬಂದಿಯ ಪ್ರತಿ ಟೇಬಲ್​ಗೆ ಮೈಕ್ರೋ ಅಬ್ಸರ್ವರ್, ಸೂಪರ್​ವೈಸರ್, ಕೌಂಟಿಂಗ್ ಅಸಿಸ್ಟೆಂಟ್ ನೇಮಕ ಮಾಡಲಾಗಿದೆ.” ಎಣಿಕಾ ಕೇಂದ್ರದಲ್ಲಿ ಮೊಬೈಲ್, ಸ್ಮಾರ್ಟ್ ವಾಚ್, ಕ್ಯಾಲ್ಕ್ಯುಲೇಟರ್ ನಿಷೇಧಿಸಲಾಗಿದ್ದು, ಪಾಸ್ ಪಡೆದ ಏಜೆಂಟ್​ಗಳು ಹಾಗೂ ಅಭ್ಯರ್ಥಿಗಳಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ನೀಡಲಾಗಿದೆ. ಇದಲ್ಲದೇ ರಾಮನಗರ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ತಿಳಿಸಿದರು.

ಸಂಭ್ರಮಾಚರಣೆ ಇಲ್ಲ: ಗೆದ್ದ ಅಭ್ಯರ್ಥಿಗಳು ಯಾವುದೇ ಸಂಭ್ರಮಾಚರಣೆ, ಮೆರವಣಿಗೆ ಮಾಡುವಂತಿಲ್ಲ‌. ಪಟಾಕಿ ಸಿಡಿಸಲು ಅನುಮತಿ ಇಲ್ಲ. ಎಣಿಕಾ ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭದ್ರತೆಗೆ 650 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದಲ್ಲದೇ ಮೂರು ಕೆಎಸ್ಆರ್​ಪಿ, ನಾಲ್ಕು ಡಿಆರ್ ತುಕಡಿಗಳ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಎಸ್ಪಿ ಕಾರ್ತಿಕ್ ರೆಡ್ಡಿ ಮನವಿ ಮಾಡಿದರು.

ಗಡಿಜಿಲ್ಲೆ ಚಾಮರಾಜನಗರದಲ್ಲಿ ಸಕಲ ಸಿದ್ಧತೆ: ಮತ  ಎಣಿಕೆ ಕಾರ್ಯಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಚಾಮರಾಜನಗರದ ತಾಲೂಕಿನ ಬೇಡರಪುರದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.

ಎಣಿಕೆ ಕಾರ್ಯವನ್ನು ಸುಲಲಿತವಾಗಿ ನಡೆಸುವ ಸಲುವಾಗಿ ಕಂಪ್ಯೂಟರ್, ಸ್ಕ್ಯಾನರ್, ಪ್ರಿಂಟರ್ಸ್, ಯುಪಿಎಸ್, ಟೆಲಿಫೋನ್, ಇಂಟರ್​ನೆಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಮತ್ತು ಸುರಕ್ಷಿತವಾಗಿ ನಡೆಸಲು ಅಗತ್ಯ ಬ್ಯಾರಿಕೇಡಿಂಗ್, ಸಿಗ್ನಲ್ಸ್ ಮತ್ತು ವಾಹನ ನಿಲುಗಡೆಯನ್ನು ಕಲ್ಪಿಸಲಾಗಿದೆ ಎಂದರು.

ಅಂಚೆ ಮತಪತ್ರಗಳ ಮೂಲಕ ಒಟ್ಟು 4,405 ಮತ ಚಲಾವಣೆಯಾಗಿವೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ತಲಾ 14 ಟೇಬಲ್ (ಮೇಜು)ಗಳಲ್ಲಿ ನಡೆಯಲಿದೆ. ಪ್ರತಿ ಟೇಬಲ್‍ಗೆ ತಲಾ 14 ಮಂದಿ ಮತ ಎಣಿಕೆ ಮೇಲ್ವಿಚಾರಕರು, 14 ಮಂದಿ ಎಣಿಕೆ ಸಹಾಯಕರು, 14 ಮಂದಿ ಮೈಕ್ರೋ ಅಬ್ಸರ್‍ವರ್ ಹಾಗೂ ಅಂಚೆ ಮತ ಪತ್ರ ಎಣಿಕೆಗೆ 5 ಮಂದಿ ಸೇರಿ ಒಟ್ಟು 45 ಸಿಬ್ಬಂದಿ ಇರಲಿದ್ದಾರೆ.

ಅಂಚೆ ಮತಪತ್ರ ಎಣಿಕೆಗೆ 8 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದ್ದು, 8 ಮಂದಿ ಏಜೆಂಟ್​ಗಳನ್ನು ನೇಮಕ ಮಾಡಲಾಗಿದೆ. ಅಂಚೆ ಮತಪತ್ರಗಳ ಎಣಿಕೆಯು ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಅವರ ಸಮ್ಮುಖದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇವಿಎಂ ಮತ ಯಂತ್ರಗಳ ಮೂಲಕ ಮತ ಎಣಿಕೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಏಜೆಂಟ್​ಗಳಂತೆ ಒಟ್ಟು 120 ಮಂದಿ ಎಣಿಕೆ ಏಜೆಂಟ್​ಗಳನ್ನು ನೇಮಕಾತಿ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‍ಗಳಂತೆ ಒಟ್ಟು 112 ಮತ ಎಣಿಕೆ ಟೇಬಲ್‍ಗಳನ್ನು ಸ್ಥಾಪಿಸಲಾಗಿದೆ. ಮತ ಎಣಿಕೆ ಟೇಬಲ್‍ಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಎಣಿಕೆ ಕಾರ್ಯವನ್ನು ಸಂಬಂಧಿಸಿದ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ