NEWSದೇಶ-ವಿದೇಶನಮ್ಮರಾಜ್ಯ

ದೇಶಕ್ಕೆ ಸ್ಥಿರ, ಬಲಿಷ್ಠ ಸರ್ಕಾರದ ಅಗತ್ಯವಿದೆ : 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಿಎಂ ಮೋದಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಇಂದು ಇಡೀ ಭಾರತ 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದರು.

ಬಳಿಕ ರಾಷ್ಟ್ರದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ನನ್ನ ಪ್ರೀತಿಯ, 140 ಕೋಟಿ ಕುಟುಂಬಗಳು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದಲೂ ವಿಶ್ವದಲ್ಲೇ ನಂಬರ್ ಒನ್ ಆಗಿರುವ ಬೃಹತ್ ದೇಶದ ನನ್ನ ಸಹೋದರ ಸಹೋದರಿರು ಇಂದು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನು ದೇಶದ ಮತ್ತು ಭಾರತವನ್ನು ಪ್ರೀತಿಸಿ ಗೌರವಿಸುವ ಜನರಿಗೆ, ಈ ಮಹಾನ್ ಪವಿತ್ರ ಸ್ವಾತಂತ್ರ್ಯದ ಹಬ್ಬದ ಶುಭಾಶಯಗಳು. 77ನೇ ಸ್ವಾತಂತ್ರ್ಯ ದಿನದಂದು ಭಾರತದ ಸ್ವಾತಂತ್ರ್ಯಕ್ಕೆ ಕೊಡುಗೆ ನೀಡಿದ ಎಲ್ಲ ವೀರರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು.

ಮಣಿಪುರ ಹಿಂಸಾಚಾರದ ಕುರಿತು ಮಾತನಾಡುತ್ತಾ, ಮಣಿಪುರ ಮತ್ತು ಭಾರತದ ಕೆಲವು ಭಾಗಗಳಲ್ಲಿ ನಡೆದ ಹಿಂಸಾಚಾರದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಳ್ಳಬೇಕಾಯಿತು. ತಾಯಂದಿರು ಮತ್ತು ಹೆಣ್ಣುಮಕ್ಕಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಆದರೆ ದೇಶವು ಮಣಿಪುರದ ಜನರೊಂದಿಗೆ ಇದೆ. ಶಾಂತಿಯಿಂದಷ್ಟೇ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಸಮಸ್ಯೆ ಪರಿಹಾರಕ್ಕೆ ಸಾಕಷ್ಟು ಪ್ರಯತ್ನ ಮಾಡುತ್ತಿವೆ ಎಂದರು.

ಇಂದು ನಮ್ಮದೇಶ ಬೃಹತ್ ಜನಸಂಖ್ಯೆ, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯನ್ನು ಹೊಂದಿದೆ. ಈ ಮೂರೂ ಒಟ್ಟಾದರೆ ದೇಶದ ಕನಸುಗಳನ್ನು ನನಸಾಗಿಸುವ ಸಾಮರ್ಥ್ಯ ಇದೆ ಎಂದು ಹೇಳಿದರು.

ನಾನು ಕಳೆದ 1000 ವರ್ಷಗಳ ಬಗ್ಗೆ ಮಾತನಾಡುತ್ತಿದ್ದೇನೆ ಏಕೆಂದರೆ ದೇಶದ ಮುಂದೆ ಮತ್ತೊಮ್ಮೆ ಅವಕಾಶವಿರುವುದನ್ನು ನಾನು ನೋಡುತ್ತದ್ದೇನೆ. ಈಗ ಬದುಕುತ್ತಿರುವ ಈ ಯುಗದಲ್ಲಿ, ನಾವು ಏನು ಮಾಡುತ್ತೇವೆ, ನಾವು ತೆಗೆದುಕೊಳ್ಳುವ ಹೆಜ್ಜೆಗಳು ಮತ್ತು ನಿರ್ಧಾರಗಳು ಸುವರ್ಣ ಇತಿಹಾಸಕ್ಕೆ ಜನ್ಮ ನೀಡುತ್ತೇವೆ ಎಂದು ತಿಳಿಸಿದರು.

‘ದೇಶಕ್ಕೆ ಸ್ಥಿರ ಮತ್ತು ಬಲಿಷ್ಠ ಸರ್ಕಾರದ ಅಗತ್ಯವಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿ ಪೈಸೆಯನ್ನೂ ಹೂಡಿಕೆ ಮಾಡುತ್ತಿದ್ದೇವೆ. ಭಾರತದಲ್ಲಿ ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ. ಭಾರತ ಈಗ ನಿಲ್ಲುವುದಿಲ್ಲ. ಕೊರೊನಾ ಅವಧಿಯು ಮಾನವನ ಸಂವೇದನೆಗಳ ಬಗ್ಗೆ ಕಲಿಸಿತು ಎಂದರು.

ಭಾರತದ ಸಾಮರ್ಥ್ಯ ಮತ್ತು ಸಾಧ್ಯತೆಗಳು ಆತ್ಮವಿಶ್ವಾಸದ ಹೊಸ ಮಜಲು ತಲುಪಲಿದೆ ಎಂಬುದು ಖಚಿತ. ನಂಬಿಕೆಯ ಈ ಹೊಸ ಎತ್ತರಗಳು ಹೊಸ ಸಾಮರ್ಥ್ಯಗಳೊಂದಿಗೆ ಮುಂದುವರಿಯುತ್ತವೆ. ಇಂದು ಭಾರತಕ್ಕೆ ಜಿ20 ಶೃಂಗಸಭೆ ಆಯೋಜಿಸುವ ಅವಕಾಶ ಸಿಕ್ಕಿದೆ. ಕಳೆದ ವರ್ಷದಲ್ಲಿ, ಅನೇಕ G20 ಕಾರ್ಯಕ್ರಮಗಳು ಭಾರತದ ಮೂಲೆ ಮೂಲೆಯಲ್ಲಿ ನಡೆದ ರೀತಿಯಲ್ಲಿ, ಭಾರತದ ಸಾಮಾನ್ಯ ಜನರ ಶಕ್ತಿ, ಭಾರತದ ವೈವಿಧ್ಯತೆಯನ್ನು ಜಗತ್ತಿಗೆ ಪರಿಚಯಿಸಲಾಗಿದೆ ಎಂದು ಹೇಳಿದರು.

ನಾವು 2014 ರಲ್ಲಿ ಜಾಗತಿಕ ಆರ್ಥಿಕತೆಯಲ್ಲಿ 10 ನೇ ಸ್ಥಾನದಲ್ಲಿದ್ದೆವು. ಇಂದು ನಾವು 5 ನೇ ಸ್ಥಾನವನ್ನು ತಲುಪಿದ್ದೇವೆ, ಅದು ತನ್ನಿಂತಾನಾಗೇ ಆಗಲಿಲ್ಲ. ಭ್ರಷ್ಟಾಚಾರ ದೇಶವನ್ನು ಆವರಿಸಿತ್ತು. 10 ವರ್ಷಗಳ ಲೆಕ್ಕವನ್ನು ದೇಶವಾಸಿಗಳಿಗೆ ನೀಡುತ್ತಿದ್ದೇನೆ. ಈ ಹಿಂದೆ ಬಡವರಿಗೆ ಮನೆ ನಿರ್ಮಿಸಲು 90 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದ್ದರು. ಇಂದು ನಾಲ್ಕು ಲಕ್ಷ ಕೋಟಿ ಖರ್ಚು ಮಾಡಲಾಗುತ್ತಿದೆ. ಕಳೆದ ಐದೂವರೆ ವರ್ಷಗಳಲ್ಲಿ 13.50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ.

ಮುಂದಿನ ತಿಂಗಳು ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರಿಗೆ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ವಿಶ್ವಕರ್ಮ ಯೋಜನೆಯನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ತಿಳಿಸಿದರು.

ಯೂರಿಯಾವನ್ನು ಕೈಗೆಟುಕುವಂತೆ ಮಾಡಲು ಕೇಂದ್ರ ಸರ್ಕಾರವು ಯೂರಿಯಾಕ್ಕೆ 10 ಲಕ್ಷ ಕೋಟಿ ರೂಪಾಯಿಗಳನ್ನು ಸಬ್ಸಿಡಿ ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಮುದ್ರಾ ಯೋಜನೆಯು ಯುವಕರಿಗೆ ತಮ್ಮ ವ್ಯವಹಾರಕ್ಕಾಗಿ 20 ಲಕ್ಷ ಕೋಟಿ ರೂಪಾಯಿಗಳನ್ನು ನೀಡಿದೆ. 8 ಕೋಟಿ ಜನರು ತಮ್ಮ ವ್ಯಾಪಾರ ಆರಂಭಿಸಿದ್ದಾರೆ. ಪ್ರತಿಯೊಂದು ಉದ್ಯಮವು 1-2 ಜನರಿಗೆ ಉದ್ಯೋಗ ನೀಡಿದೆ. ಕೊರೊನಾ ಸಮಯದಲ್ಲಿಯೂ MSME ಅನ್ನು ಮುಳುಗಲು ಬಿಡಲಿಲ್ಲ. ಒನ್ ರ‍್ಯಾಂಕ್‌ ಒನ್ ಪಿಂಚಣಿ ಯೋಜನೆಯು ಸೇನೆಯ ವೀರರು ಮತ್ತು ಅವರ ಕುಟುಂಬಗಳ ಜೇಬಿಗೆ ತಲುಪಿದೆ. ಪ್ರತಿಯೊಂದು ವರ್ಗದಲ್ಲೂ, ಭಾರತದ ಭವಿಷ್ಯವನ್ನು ಬದಲಾಯಿಸಲು ಮೊದಲಿಗಿಂತ ಹಲವು ಪಟ್ಟು ಹೆಚ್ಚು ಹಣವನ್ನು ಬಳಸಲಾಗಿದೆ ಎಂದು ವಿವರಿಸಿದರು.

ನಮಗೆ ಬೇಕಾದ ವಸ್ತುಗಳನ್ನು ಆಮದು ಮಾಡಿಕೊಳ್ಳುವಾಗ ಹಣದುಬ್ಬರವನ್ನೂ ಆಮದು ಮಾಡಿಕೊಳ್ಳುವುದು ದುರದೃಷ್ಟಕರ. ಆದರೆ, ಭಾರತವು ಹಣದುಬ್ಬರವನ್ನು ನಿಯಂತ್ರಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದೆ. ನಮ್ಮ ಸ್ಥಿತಿಯು ಪ್ರಪಂಚದ ಇತರ ಭಾಗಗಳಿಗಿಂತ ಉತ್ತಮವಾಗಿದೆ ಎಂಬ ಕಾರಣದಿಂದ ನಾವು ತೃಪ್ತಿ ಹೊಂದಲು ಸಾಧ್ಯವಿಲ್ಲ. ನನ್ನ ದೇಶದ ನಾಗರಿಕರ ಮೇಲಿನ ಹಣದುಬ್ಬರದ ಹೊರೆ ಮತ್ತಷ್ಟು ಕಡಿಮೆಯಾಗುವುದನ್ನು ನೋಡಲು ನಾನು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದರು.

ದೇಶವನ್ನು ಮುಂದೆ ಕೊಂಡೊಯ್ಯುವ ಒಂದು ವಿಷಯವೆಂದರೆ ಮಹಿಳಾ ನೇತೃತ್ವದ ಅಭಿವೃದ್ಧಿ. ಇಂದು ಭಾರತವು ನಾಗರಿಕ ವಿಮಾನಯಾನದಲ್ಲಿ ಅತಿ ಹೆಚ್ಚು ಪೈಲಟ್‌ಗಳನ್ನು ಹೊಂದಿದೆ ಎಂದು ಹೆಮ್ಮೆಯಿಂದ ಹೇಳಬಹುದು. ಮಹಿಳಾ ವಿಜ್ಞಾನಿಗಳು ಚಂದ್ರಯಾನ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ. ಮಹಿಳಾ ನೇತೃತ್ವದ ಅಭಿವೃದ್ಧಿಯ ಪ್ರಾಮುಖ್ಯತೆಯನ್ನು G20 ದೇಶಗಳು ಸಹ ಗುರುತಿಸುತ್ತಿವೆ ಎಂದರು.

ಗ್ರಾಮದಲ್ಲಿರುವ ಎರಡು ಕೋಟಿ ಸಹೋದರಿಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡುವುದು ನನ್ನ ಕನಸು. ಅದಕ್ಕಾಗಿಯೇ ನಾವು ಹೊಸ ಯೋಜನೆಗೆ ಯೋಚಿಸುತ್ತಿದ್ದೇವೆ. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ತರಲಿದೆ. ಡ್ರೋನ್‌ಗಳ ಸೇವೆಯನ್ನು ಒದಗಿಸಲು ನಾವು ಅವರಿಗೆ ತರಬೇತಿ ನೀಡುತ್ತೇವೆ. ದೇಶ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದುತ್ತಿದೆ. ದೇಶ ಆಧುನಿಕತೆಯತ್ತ ಸಾಗುತ್ತಿದೆ. ಮುಂದಿನ 5 ವರ್ಷಗಳಲ್ಲಿ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗುವುದು ಎಂದು ಮೋದಿಯವರ ಭರವಸೆ ನೀಡಿದರು.

ದೆಹಲಿಯಾದ್ಯಂತ ಬಿಗಿ ಭದ್ರತೆ: ಈ ವಿಶೇಷ ಕಾರ್ಯಕ್ರಮಕ್ಕಾಗಿ ದೆಹಲಿಯಾದ್ಯಂತ ಬಿಗಿ ಭದ್ರತೆ ಮಾಡಲಾಗಿದದ್ದು, ಪಿಎಂ ಮೋದಿಯವರ ಗೌರವಾನ್ವಿತ ತಂಡದಲ್ಲಿ ಸೇನೆ, ವಾಯುಪಡೆ ಮತ್ತು ದೆಹಲಿ ಪೊಲೀಸರ ತಲಾ 25 ಸಿಬ್ಬಂದಿ ಮತ್ತು ನೌಕಾಪಡೆಯ ಒಬ್ಬ ಅಧಿಕಾರಿ ಮತ್ತು 24 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.

ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು.

ಇದರೊಂದಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಹಲವು ಹೊಸ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಕೂಡ ಆಹ್ವಾನಿಸಲಾಗಿದೆ. ಈ ಸಮಾರಂಭಕ್ಕೆ ದೇಶಾದ್ಯಂತ ವಿವಿಧ ವೃತ್ತಿ ನಿರತ 1800 ಮಂದಿಯನ್ನು ತಮ್ಮ ಸಂಗಾತಿಗಳೊಂದಿಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, 10 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ ಒಂದು ಸಾವಿರ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೆಂಪು ಕೋಟೆಯಲ್ಲೂ ಆಂಟಿ ಡ್ರೋನ್ ವ್ಯವಸ್ಥೆ ಅಳವಡಿಸಲಾಗಿದೆ. ಪ್ರಧಾನಿ ಮತ್ತು ಇತರ ವಿವಿಐಪಿ ಅತಿಥಿಗಳ ಭದ್ರತೆಗಾಗಿ ಸ್ನೈಪರ್‌ಗಳು, ಗಣ್ಯ SWAT ಕಮಾಂಡೋಗಳು ಮತ್ತು ಶಾರ್ಪ್‌ಶೂಟರ್‌ಗಳನ್ನು ನಿಯೋಜಿಸಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು