NEWSದೇಶ-ವಿದೇಶಸಿನಿಪಥ

ನಟ ದರ್ಶನ್​​ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್‌ ಅನುಮತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟ ದರ್ಶನ್​​ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯ ಅನುಮತಿ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್​​ ಅವರಿಗೆ ಜೂನ್ 1ರಿಂದ 25ರವರೆಗೆ ದುಬೈ ಹಾಗೂ ಯುರೋಪ್​​ಗೆ ಹೋಗಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b)ರಡಿ ದರ್ಶನ್ ಪರವಾಗಿ ಸುನಿಲ್ ಕುಮಾರ್ ಎಂಬವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕರು, ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದರೆ ವಾಪಸ್ ಬರುವುದು ಅನುಮಾನ ಹೀಗಾಗಿ ಅನುಮತಿ ಕೊಡಬೇಡಿ ಎಂದು ನಿನ್ನೆ ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು.

ಜೈಮಾತಾ ಕಂಬೈನ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗುತ್ತಿರುವ ‘ಡೆವಿಲ್’ ಸಿನಿಮಾ ಚಿತ್ರೀಕರಣಕ್ಕಾಗಿ ಇಂದು 25 ದಿನಗಳವರೆಗೆ ವಿದೇಶಕ್ಕೆ ದರ್ಶನ್ ತೆರಳಲು ನ್ಯಾಯಾಲಯ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಈ ಮೊದಲು ಜಾಮೀನು ನೀಡುವಾಗ ಬೆಂಗಳೂರು ಬಿಟ್ಟು ಎಲ್ಲಿಗೂ ತೆರಳುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿತ್ತು. ಬಳಿಕ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ಹೋಗಲು ಅವಕಾಶ ನೀಡಿ ಜಾಮೀನಿನ ಷರತ್ತು ಸಡಿಲಿಸಿತ್ತು. ಇದೀಗ ವಿದೇಶಕ್ಕೆ ತೆರಳಲು ಅನುಮತಿ ನೀಡಿದ್ದು ಅಭಿಮಾನಿಗಳಿಗೂ ಖುಷಿ ತಂದಿದೆ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ