Wednesday, October 30, 2024
NEWSನಮ್ಮರಾಜ್ಯರಾಜಕೀಯ

ಗೋಮುಖ ವ್ಯಾಘ್ರ ಸಚಿವ ಸೋಮಣ್ಣ ರಾಜೀನಾಮೆ ಕೊಡಬೇಕು: ಆಪ್ ಸುರೇಶ್‌ ರಾಥೋಡ್‌ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕಿನ ಹಂಗಳ ಗ್ರಾಮದಲ್ಲಿ ಮನವಿ ಸಲ್ಲಿಸಲು ಬಂದಂತಹ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಸಚಿವ ವಿ. ಸೋಮಣ್ಣ ಗೋವಿನ ಮುಖದ ವ್ಯಾಘ್ರ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸರಕಾರಕ್ಕೆ ಸಣ್ಣ ಮಟ್ಟದ ಮರ್ಯಾದೆ ಇದ್ದರೆ ತಕ್ಷಣ ಅವರ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಆಮ್‌ ಆದ್ಮಿ ಪಕ್ಷದ ಹಿರಿಯ ಮುಖಂಡರು ಹಾಗೂ ಬೆಂಗಳೂರು ಘಟಕದ ಸಂಘಟನಾ ಕಾರ್ಯದರ್ಶಿ ಸುರೇಶ್‌ ರಾಥೋಢ್‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಸತಿ ಸಚಿವ ವಿ. ಸೋಮಣ್ಣ ಸಂಭಾವಿತರ ಸೋಗಿನಲ್ಲಿರುವ ಗೋಮುಖ ವ್ಯಾಘ್ರ. ಕೇವಲ ತಮ್ಮ ಹಾಗೂ ಕುಟುಂಬದ ಅಭಿವೃದ್ದಿಗಾಗಿ ಶ್ರಮ ಹಾಕುವ ಅವರು ಬಡವರ ಪರ ಎಂದು ನೀಡುವ ಎಲ್ಲ ಹೇಳೀಕೆಗಳು ಸುಳ್ಳು. ಬಡವರ ಅಭಿವೃದ್ದಿಗಾಗಿ ಶ್ರಮಿಸುವ ಯಾವೊಬ್ಬ ಜನಪ್ರತಿನಿಧಿಯೂ ನಾಗರೀಕರ ಮೇಲೆ ಹಲ್ಲೆ ಮಾಡುವುದಿಲ್ಲ ಎಂದು ಖಂಡಿಸಿದ್ದಾರೆ.

ಇನ್ನು ಉನ್ನತ ಸ್ಥಾನದಲ್ಲಿರುವರು ತಾಳ್ಮೆ ಕಳೆದುಕೊಂಡು ಈ ರೀತಿ ಹಲ್ಲೆ ಮಾಡುವುದು ಸರಿಯಲ್ಲ. ಇದು ಸಂಭಾವಿತ ಸೋಗಿನ ಹಿಂದೆ ಇರುವಂತಹ ವ್ಯಾಘ್ರತನದ ಪ್ರದರ್ಶನವಾಗಿದ್ದು, ಸಣ್ಣ ಮಟ್ಟದ ಬದ್ದತೆಯನ್ನು ಹೊಂದಿದ್ದರೂ ಮುಖ್ಯಮಂತ್ರಿಗಳು ಈ ಕೂಡಲೇ ಸೋಮಣ್ಣ ಅವರನ್ನು ಸಚಿವ ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ