NEWSನಮ್ಮಜಿಲ್ಲೆನಮ್ಮರಾಜ್ಯ

ಸಂಸದ ಪ್ರತಾಪ್ ಸಿಂಹ ಸಹೋದನಿಂದ ಕೋಟ್ಯಂತ ರೂ. ಮೌಲ್ಯದ ಮರಗಳ ಹನನ: ಕಾಂಗ್ರೆಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಅಕ್ರಮವಾಗಿ ಕೋಟ್ಯಂತ ರೂಪಾಯಿ ಬೆಲೆಬಾಳುವ ಮರಗಳನ್ನು ಕಡಿದು ಸಾಗಿದ್ದಾರೆ ಎಂಬ ಆರೋಪಕ್ಕೆ ಸಿಲುಕಿದ್ದಾರೆ.

ಹೌದು! ಸಂಸದ ಪ್ರತಾಪ್‌ಸಿಂಹ ಸಂಸತ್ ಮೇಲಿನ ದಾಳಿಕೋರರಿಗೆ ಪಾಸ್ ನೀಡಿದ ಆರೋಪಕ್ಕೆ ಗುರಿಯಾದರೆ, ಇತ್ತ ಅವರ ಸಹೋದರ ವೃಕ್ಷ ಕರ್ಮಕಾಂಡದಲ್ಲಿ ಸಿಲುಕಿದ್ದಾರೆ. ನೂರಾರು ದೈತ್ಯ ಮರಗಳನ್ನು ಹನನ ಮಾಡುವ ಮೂಲಕ ಅಕ್ರಮವೆಸಗಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಹಾಸನ ಜಿಲ್ಲೆಯ ಬೇಲೂರು ಬಳಿ ಈ ಅಕ್ರಮ ನಡೆದಿದ್ದು, ಈ ಬಗ್ಗೆ ತಹಸೀಲ್ದಾರ್ ಅವರು ಮಿಂಚಿನ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಪ್ರಕರಣ ಬಯಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿದೆ.

ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ, ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬಿಸಿಯಾಗಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ