NEWSನಮ್ಮಜಿಲ್ಲೆನಮ್ಮರಾಜ್ಯ

9ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಸೈಕಲ್‌ ಜಾಥಾ: ಅ.21ರಂದು ಬೀದರ್‌ನಲ್ಲಿ ಸಮಾವೇಶ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಸೈಕಲ್ ಜಾಥಾ ಇಂದಿಗೆ 9ನೇ ದಿನಕ್ಕೆ ಕಾಲಿಟ್ಟಿದ್ದು, 8ನೇದಿನವಾದ ಸೋಮವಾರ ಯಾದಗಿರಿ ಡಿಸಿಗೆ ಮನವಿ ಸಲ್ಲಿಸುವ ಮೂಲಕ ಬೀದರ್‌ ಕಡೆ ಹೊರಟ ಜಾಥಾ 30ಕಿಮೀ ಕ್ರಮಿಸಿ ಮಾರ್ಗ ಮಧ್ಯೆ ಗೌಡನಹಳ್ಳಿ ಗ್ರಾಮದ ಬೋಜಲಿಂಗೆಶ್ವರ ದೇವಸ್ಥಾನದಲ್ಲಿ ರಾತ್ರಿ ವಾಸ್ತವ್ಯ ಹೂಡಿತು.

ಇಂದು ಮುಂಜಾನೆ ಮತ್ತೆ ಜಾಥಾ ಮುಂದುರಿದಿದ್ದು, ಬೋಜಲಿಂಗೆಶ್ವರ ದೇವಸ್ಥಾನದಿಂದ ಬೀದರ್‌ ಕಡೆ ಸಾಗುತ್ತಿದೆ. ಇದೇ ಅಕ್ಟೋಬರ್‌ 21ರಂದು ಬೀದರ್ ತಲುಪಲಿದ್ದು, ಅಲ್ಲಿನ ನೌಕರರು ಅದ್ದೂರಿ ಸ್ವಾಗತ ಕೋರಲು ಸಜ್ಜಾಗಿದ್ದಾರೆ.

ಇನ್ನು ಸಾರಿಗೆಯ ಬೀದರ್‌ ವಿಭಾಗದ ಎಲ್ಲ ರಜೆ, ವಾರದ ರಜೆ ಇರುವ ಮತ್ತು ಕರ್ತವ್ಯ ಮುಗಿಸಿ ಮನೆಗೆ ಮರಳುವ ನೌಕರರು ಸಮವಸ್ತ್ರ ಧರಸಿ ಬರಬೇಕೆಂದು ಸಲಹೆ ನೀಡಿದ್ದಾರೆ.

ಅ.21ರಂದು ಬೆಳಗ್ಗೆ 10ಗಂಟೆಗೆ ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಾಥಾದೊಂದಿಗೆ ಎಲ್ಲ ನೌಕರರು ಸಮಾವೇಶಗೊಂಡು ಡಿಸಿ ಅವರಿಗೆ ಮನವಿ ಸಲ್ಲಿಸಲಿದ್ದಾರೆ.

ಜಾಥಾವು ನಿರಂತರವಾಗಿ ಸಾಗುತ್ತಿದ್ದು, ಚಳಿ, ಮಳೆ, ಬಿಸಿಲು ಎನ್ನದೆ ಸಮಸ್ತ ಸಾರಿಗೆ ಅಧಿಕಾರಿಗಳು ಮತ್ತು ನೌಕರರಿಗೆ ಸಲ್ಲಬೇಕಿರುವ ನ್ಯಾಯಯುತ ವೇತನದ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಮತ್ತು ನಿಗಮಗಳ ಆಡಳಿತ ಮಂಡಳಿಯನ್ನು ಎಚ್ಚರಿಸಲು ಕೂಟದ ಪದಾಧಿಕಾರಿಗಳು ಟೊಂಕಕಟ್ಟಿ ಸಾಗುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ