CrimeNEWSನಮ್ಮಜಿಲ್ಲೆ

ಸೈಕಲ್‌ ವ್ಹೀಲಿಂಗ್ ವಿಚಾರ: ಎರಡು ಗುಂಪುಗಳ ನಡುವೆ ಘರ್ಷಣೆ – ಆರು ಮಂದಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಸೈಕಲ್‌ ವ್ಹೀಲಿಂಗ್ ಮಾಡಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು.

ಚಾ.ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂ‌ಪುಗಳನ್ನು ಚದುರಿಸಿದ್ದಾರೆ. ಈ ಮೂಲಕ ಪರಿಸ್ಥಿತಿ ಕೈ ಮೀರದಂತೆ ನೋಡಿಕೊಂಡಿದ್ದಾರೆ.

ಬಳಿಕ ವ್ಹೀಲಿಂಗ್ ವಿಚಾರವಾಗಿ ಕೋಮುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ತಲಾ ಮೂವರು ಯುವಕರ ಮೇಲೆ ಪ್ರಕರಣ ದಾಖಲಿಸಿ ಒಟ್ಟು 6 ಮಂದಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗರರೊಂದಿಗೆ ಮಾತನಾಡಿ ಅವರು, ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವ್ಹೀಲಿಂಗ್ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ವ್ಹೀಲಿಂಗ್ ನಿಗ್ರಹಕ್ಕೆ ವಿಶೇಷ ತಂಡ ರಚನೆ ಮಾಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಎಚ್ಚರಿಕೆ ಮೂಡಿಸಲು ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಯಿತು ಎಂದು ಹೇಳಿದರು.

ಕೆ.ಎಸ್.ಆರ್.ಪಿ, ಡಿ.ಎ.ಆರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿಗಳಿಂದ ಪಥಸಂಚಲನ ನಡೆಸಿ ಕೋಮುಗಲಭೆಗೆ ಪ್ರಚೋದನೆ ಹಾಗೂ ಕಾನೂನುಬಾಹಿರ ಚಟುವಟಿಕೆ ನಡೆಸುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಹೇಳಿದರು.

ಅಡಿಷನಲ್ ಎಸ್ಪಿ ಸುಂದರ್‌ರಾಜು, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಪೊಲೀಸ್ ಸಿಬ್ಬಂದಿ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಈಗ ಪರಿಸ್ಥಿತಿ ಹತೋಟಿಯಲ್ಲಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್