CrimeNEWSಬೆಂಗಳೂರು

ಸಿಲಿಂಡರ್ ಸ್ಫೋಟ: 6 ಮಂದಿಗೆ ಗಾಯ- ಇಬ್ಬರ ಸ್ಥಿತಿ ಗಂಭೀರ, 5 ಮನೆಗಳಿಗೂ ಹಾನಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನಿಲ ಸಿಲಿಂಡರ್ ಸ್ಫೋಟಗೊಂಡು 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಎಲ್​ಬಿಎಸ್ ಲೇಔಟ್‌‌ ಮನೆಯೊಂದರಲ್ಲಿ ನಡೆದಿದೆ.

ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ.

ಪಸೀಯಾ ಬಾನು (50), ಸಲ್ಮಾ (22), ಶಾಹಿದ್ (16), ಆಸ್ಮಾ 50 ಮತ್ತು ಅಪ್ರೋಜ್ (23) ಘಟನೆಯಲ್ಲಿ ಗಾಯಗೊಂಡಿದ್ದು, ಎಲ್ಲರನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಗೊಂಡಿರುವ ಮನೆಯ ಮಾಲೀಕ ಸಲೀಂ ಎಂದು ಗುರುತಿಸಲಾಗಿದೆ. ಸಲೀಂ ಮನೆಯನ್ನು ಬಾಡಿಗೆಗೆ ನೀಡಿದ್ದರು.

ಬಹುತೇಕ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡಿರೋ ಸಾಧ್ಯತೆ ಹೆಚ್ಚಿದೆ. ರಾತ್ರಿ ಗ್ಯಾಸ್ ಸೋರಿಕೆಯಾಗಿದ್ದು, ಮನೆಗಳ ಕಿಟಕಿ ಮತ್ತು ಬಾಗಿಲುಗಳನ್ನು ಹಾಕಿದ್ದರಿಂದ ಲೀಕ್ ಆಗಿರುವ ಅನಿಲ ಅಲ್ಲಿಯೇ ಶೇಖರಣೆಗೊಂಡಿದೆ. ಬೆಳಗ್ಗೆ ಎಲೆಕ್ಟ್ರಿಕ್ ಸ್ವಿಚ್ಛ್ ಆನ್ ಮಾಡಿದ್ದರಿಂದ ಶೇಖರಣೆಗೊಂಡಿರುವ ಅನಿಲ ಸ್ಫೋಟವಾಗಿದೆ. ಆದರೆ ಸಿಲಿಂಡರ್ ಸ್ಪೋಟ ಆಗಿಲ್ಲ ಎನ್ನಲಾಗುತ್ತಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಆರಂಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಹೇಳಲಾಗಿತ್ತು. ಆದ್ರೆ ಜಖಂ ಆಗಿರುವ ಐದು ಮನೆಗಳಲ್ಲಿ ಸಿಲಿಂಡರ್ ಸ್ಪೋಟಗೊಂಡಿಲ್ಲ ಎಂದು ಭಾರತ್ ಗ್ಯಾಸ್ ಸಿಬ್ಬಂದಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದ್ದಾರೆ.

ಮನೆಗಳ ಗೋಡೆಗಳು ಅಟ್ಯಾಚ್ ಆಗಿರೋದ್ರಿಂದ ಹಾನಿಯಾಗಿದೆ. ಇದೇ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ. ಒಟ್ಟು ಐದು ಮನೆಗಳು ಡ್ಯಾಮೇಜ್ ಆಗಿವೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಸೀರಿಯಸ್ ಆಗಿ ಇದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದೆ.

ದುಷ್ಕರ್ಮಿಗಳಿಂದ ಬೈಕ್‌ಗಳಿಗೆ ಬೆಂಕಿ? : ಬೆಂಗಳೂರಿನ ರಾಜಾಜಿನಗರ ಮೆಟ್ರೋ ಸ್ಟೇಷನ್ ಸಮೀಪ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್‌‌ಗಳು ಬೆಂಕಿಗಾಹುತಿಯಾಗಿವೆ. ಇಂದು ಮುಂಜಾನೆ ದುಷ್ಕರ್ಮಿಗಳು ಬೈಕ್‌ಗಳಿಗೆ ಬೆಂಕಿ ಹಾಕಿರೋ ಶಂಕೆ ವ್ಯಕ್ತವಾಗಿದೆ. 4 ಬೈಕ್‌ಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ