ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್
ಇಂದು ಬುಧವಾರ ಜೂನ್ 3ರ ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ ಪ್ರಮಾಣ ವಚನ ಸ್ವೀಕರಿಸಿದರು.

- ಒಬ್ಬರು ಉಪಮುಖ್ಯ,ಮಂತ್ರಿ ಹಾಗೂ 12 ಮಂದಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು
ಬೆಂಗಳೂರು: ತಳಮಟ್ಟದ ಹೋರಾಟದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಬುಧವಾರ ಜೂನ್ 3ರ ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ತಾವು ನಿಂತಿದ್ದ ಸ್ಥಳದಲ್ಲೇ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಂದು ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅತ್ಯಂತ ಅಪರೂಪದ ಹಾಗೂ ಶಕ್ತಿಶಾಲಿ ‘ಮಾಲವ್ಯ ಯೋಗ’ದ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು.
ತುಲಾ ಲಗ್ನದಲ್ಲಿ ಡಿಕೆಶಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಸ್ತುತ ಜಾತಕದಲ್ಲಿ ಗುರು ಗ್ರಹವು ಉಚ್ಚ ಸ್ಥಿತಿಯಲ್ಲಿದ್ದು, ದಶಮ ಭಾವ ಬಲವಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಎಷ್ಟು ದೊಡ್ಡ ಸವಾಲುಗಳು ಎದುರಾದರೂ ಅದನ್ನೆಲ್ಲ ಮೆಟ್ಟಿ ನಿಂತು ಜನಪರ ಹಾಗೂ ಸುಗಮ ಆಡಳಿತ ನಡೆಸಲು ಈ ಮುಹೂರ್ತ ಹಾದಿ ಸುಗಮ ಮಾಡಿಕೊಡಲಿದೆ ಎಂಬ ಬಲವಾದ ನಂಬಿಕೆ ಇದೆ.
ಬಳಿಕ ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು: ಬಳಿಕ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್ ಅವರು ದೇವರ ಹೆಸರಿನಲ್ಲಿ, ಎಂ.ಬಿ.ಪಾಟೀಲ್ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಡಾ.ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಹಾಗೂ ಡಾ.ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಈ 12 ಮಂದಿ ಇಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು.
Related









