NEWSನಮ್ಮಜಿಲ್ಲೆಶಿಕ್ಷಣ-

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ: ಇಂದು ಶಾಲಾ-ಕಾಲೇಜುಗಳಿಗೆ ರಜೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ ಬೀಳುತ್ತಿರುವುದರಿಂದ ಇಂದು(ಜುಲೈ 04) ಶಾಲಾ-ಕಾಲೇಜುಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನಲ್ಲಿ ಮಾತ್ರ ರಜೆ ನೀಡಲಾಗಿದೆ. ಉಳಿದ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ಆಯಾಯ ತಹಸೀಲ್ದಾರ್‌ಗಳಿಗೆ ಬಿಟ್ಟಿದ್ದಾರೆ.

ಹವಾಮಾನ ಇಲಾಖೆಯು ದ‌‌ಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಹವಮಾನ ಇಲಾಖೆಯ ವರದಿ ಆಧರಿಸಿ ಯಾವ-ಯಾವ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆಯೋ ಆ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯ ಐದು ತಾಲೂಕುಗಳಲ್ಲಿನ ರಜೆ ಘೋಷಣೆ ಮಾಡಿದ್ದಾರೆ.

ಇನ್ನು ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಸೀಲ್ದಾರ್​ಗಳು ರಜೆ ಘೋಷಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ. ಕರಾವಳಿ ಕರ್ನಾಟಕದಲ್ಲಿ ಇಂದಿನಿಂದ ಶನಿವಾರದ ನಡುವೆ (ಜುಲೈ 07) ಅತಿ ಹೆಚ್ಚು (115.6 ಮಿ.ಮೀ ನಿಂದ 204.4 ಮಿ.ಮೀ) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಈ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಜುಲೈ 3 ರಿಂದ ಜುಲೈ 7 ರವರೆಗೆ ಕರ್ನಾಟಕ ಕರಾವಳಿಯಲ್ಲಿ 40-45 ಕಿಲೋಮೀಟರ್ ಮತ್ತು 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಒಂದು ರೀತಿಯಲ್ಲಿ ಚಂಡಮಾರುತದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ