NEWSಸಿನಿಪಥ

ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

ವಿಜಯಪಥ ಸಮಗ್ರ ಸುದ್ದಿ

ಸಿನಿಪಥ: ಎಚ್.ವಿನೋದ್ ನಿರ್ದೇಶನದ ದಳಪತಿ ವಿಜಯ್ ಅವರ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಭಾರಿ ಸದ್ದುಮಾಡುತ್ತಿದೆ.

ತಮಿಳು ಸಿನಿಮಾ ಬಾಕ್ಸ್ ಆಫೀಸ್ ಕಿಂಗ್ ವಿಜಯ್ ಸತತ ಹಿಟ್‌ಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಎಚ್. ವಿನೋದ್ ನಿರ್ದೇಶನದಲ್ಲಿ ದಳಪತಿ 69 ಚಿತ್ರ ನಿರ್ಮಾಣವಾಗುತ್ತಿದೆ. ಸಿನಿಮಾದಿಂದ ನಿವೃತ್ತಿ ಹೊಂದುವ ಮುನ್ನ ವಿಜಯ್ ನಟಿಸಲಿರುವ ಕೊನೆಯ ಚಿತ್ರ ಇದಾಗಿದೆ.

ಬೀಸ್ಟ್ ಸಿನಿಮಾದಲ್ಲಿ ವಿಜಯ್ ಜೊತೆ ನಟಿಸಿದ್ದ ಪೂಜಾ ಹೆಗ್ಡೆ ನಾಯಕಿ. ಬಾಲಿವುಡ್ ನಟ ಬಾಬಿ ಡಿಯೋಲ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಮಮಿತಾ ಬೈಜು, ಡಿಜೆ ಅರುಣಾಚಲಂ ಮುಂತಾದ ತಾರಾಗಣ ಕೂಡ ಚಿತ್ರದಲ್ಲಿದೆ. ಅನಿರುದ್ಧ್ ಸಂಗೀತ ನೀಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ಬೃಹತ್ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ.

ಸತ್ಯನ್ ಸೂರ್ಯನ್ ಛಾಯಾಗ್ರಹಣ, ಅನಲ್ ಅರಸು ಸಾಹಸ, ಪ್ರದೀಪ್ ಇ ರಾಘವ್ ಸಂಕಲನ, ಸೆಲ್ವಕುಮಾರ್ (ಕಲಾ ನಿರ್ದೇಶನ) ಮುಂತಾದ ಬಲಿಷ್ಠ ತಾಂತ್ರಿಕ ತಂಡದೊಂದಿಗೆ ದಳಪತಿ 69 ಚಿತ್ರೀಕರಣ ಭರದಿಂದ ಸಾಗಿದೆ. ಈ ಚಿತ್ರ ಈ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ನಂತರ ವಿಜಯ್ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

ಗಣರಾಜ್ಯೋತ್ಸವದಂದು ದಳಪತಿ 69 ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ನಾಲೈಯ ತೀರ್ಪು ಎಂದು ಹೆಸರಿಡಲಾಗಿದೆ. ಪೋಸ್ಟರ್‌ನಲ್ಲಿ ವಿಜಯ್ ತಮ್ಮ ಹಿಂದೆ ಇರುವ ಜನರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವಂತೆ ತೋರಿಸಲಾಗಿದೆ. ವಿಜಯ್ ಈ ಚಿತ್ರದಲ್ಲಿ ಸೇನಾಧಿಕಾರಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ