NEWSನಮ್ಮರಾಜ್ಯರಾಜಕೀಯ

ಬಿ.ವೈ.ವಿಜಯೇಂದ್ರನಿಂದ ಬಿಜೆಪಿಗೆ ಡ್ಯಾಮೇಜ್ : ಶಾಸಕ ಬಸನಗೌಡ ಯತ್ನಾಳ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಭಾರತೀಯ ಜನತಾ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರನಿಂದ ಎಂದು ಬಿಜೆಪಿಯಾ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು. ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಬಿಎಸ್​ವೈ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.

ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಯಡಿಯೂರಪ್ಪ ಒಳ್ಳೆಯವರು ಇದ್ದಾರೆ ಎಂದು ಬಿಎಸ್‌ವೈ ಬಗ್ಗೆ ಮೃದುಮಾತುಗಳನ್ನಾಡಿದರು.

ಪಿಎಸ್​ಐ ನೇಮಕಾತಿ ಹಗರಣದ ತನಿಖೆ ಸಿಬಿಐಗೆ ವಹಿಸಿ. ಇಡೀ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಸಿಎಂ ಎಚ್​​​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಪುತ್ರನ ಕೈವಾಡದ ಬಗ್ಗೆ ನನಗೆ 10 ಬಾರಿ ನನಗೆ ಪ್ರಶ್ನೆ ಕೇಳಿದ್ದಾರೆ. ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳ ಎಂದು ಗೊತ್ತಾಗಲಿದೆ ಎಂದು ಒತ್ತಾಯಿಸಿದರು.

ಇನ್ನು ADGP ಒಬ್ಬರನ್ನೇ ಅರೆಸ್ಟ್​ ಮಾಡಿ ಎಫ್​ಐಆರ್​ ದಾಖಲಿಸಿದ್ದಾರೆ. ADGP ಒಬ್ಬರೇ ಶಾಮೀಲಾಗಿಲ್ಲ. ಇದರ ಹಿಂದೆ ದೊಡ್ಡ ಕಳ್ಳರಿದ್ದಾರೆ. ಈ ನಿಟ್ಟಿನಲ್ಲಿ ಸಿಬಿಐ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದ್ದೇನೆ ಎಂದರು.

ಅಲದೆ ಈ ಪಿಎಸ್ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್, ನಮ್ಮವರು ಹಾಗೂ ಜೆಡಿಎಸ್ ನವರು ಕೂಡ ಇದ್ದಾರೆ ಎಂದು ವಾಗ್ದಾಳಿ ಮಾಡಿದರು. ಪಿಎಸ್​ಐ ಹುದ್ದೆಗಾಗಿ 70-80 ಲಕ್ಷ ಹಣ ಕೊಟ್ಟಿದ್ದಾರೆ, ಅವರ ಕುಟುಂಬವೇ ಹಾಳಾಗಿ ಹೋಗುತ್ತವೆ. ಈ ನಿಟ್ಟಿನಲ್ಲಿ ಪ್ರಮಾಣಿಕ ತನಿಖೆಗಾಗಿ ಗೃಹ ಸಚಿವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಇನ್ನು 70-80 ಲಕ್ಷ ರೂ. ಕೊಟ್ಟವರ ಹಣವನ್ನು ವಾಪಸ್ ಕೊಡಿಸಬೇಕು. ಇಡೀ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಬೇಕು. ಇಂಥ ಘಟನೆಗಳಿಂದಲೇ ಭ್ರಷ್ಟಾಚಾರ ಬೆಳೆದಿದೆ. ಪೊಲೀಸ್ ಆಧಿಕಾರಿಗಳ ವರ್ಗಾವಣೆಗೂ ಹಣ ತಿಂದರೆ ಪ್ರಾಮಾಣಿಕತೆ ಬೆಳೆಸಲು ಸಾಧ್ಯವಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ”