Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆಸಂಸ್ಕೃತಿ

ದಸರಾ ಗಜಪಡೆಯ ರಾಣಿ ಲಕ್ಷ್ಮೀ ಪುತ್ರನ ನಾಮಕರಣ ಸಮಾರಂಭ: ಮಾವುತರಿಗೆ ಹೋಳಿಗೆ ಊಟ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು : ದಸರಾದಲ್ಲಿ ಭಾಗವಹಿಸುವ ಗಜಪಡೆಯಲ್ಲಿನ ಲಕ್ಷ್ಮೀ ಆನೆ ಗಂಡು ಮರಿಗೆ ಜನ್ಮನೀಡಿರುವ ಹಿನ್ನೆಲೆಯಲ್ಲಿ ಮಾವುತ ಮತ್ತು ಕಾವಾಡಿಗರ ಕುಟುಂಬದವರಿಗೆ ಒಬ್ಬಟ್ಟಿನ ಊಟವನ್ನು ಇಂದು ಆಯೋಜನೆ ಮಾಡಲಾಗಿತ್ತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ವೇಳೆ ಜಿಲ್ಲಾಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ದಸರಾ ಆನೆಗಳನ್ನು ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರೊಟ್ಟಿಗೆ ಸಮಯ ಕಳೆದರು. ಜತೆಗೆ ಅವರ ಯೋಗಕ್ಷೇಮ ವಿಚಾರಿಸಿದರು.

ಮಾವುತ ಮತ್ತು ಕಾವಾಡಿಗರ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾಗೆ ಆಗಮಿಸಿರುವ ವೇಳೆ ಲಕ್ಷ್ಮೀ ಆನೆ ಗಂಡು ಮರಿಗೆ ಜನ್ಮನಿಡಿದ್ದು ತಾಯಿ ಆನೆ ಮತ್ತು ಮರಿ ಎರಡೂ ಕೂಡ ಆರೋಗ್ಯವಾಗಿವೆ. ಇದರ ಜತೆಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಆನೆಮರಿಗೆ ಶ್ರೀ ದತ್ತಾತ್ರೇಯ ಎಂದು ನಾಮಕರಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರು ಸೇರಿ ಎಲ್ಲರಿಗೂ ಒಬ್ಬಟ್ಟಿನ ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಇನ್ನು ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಸಜ್ಜಾಗಿದೆ. ದಸರಾಗೆ ಎಲ್ಲಾ ತಯಾರಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ನಾಳೆ ಸಂಜೆ ಅಂತಿಮವಾಗಲಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ