NEWSಶಿಕ್ಷಣ-

ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ದಸರಾ ರಜೆ ಘೋಷಿಸಿದ್ದು, ಇದು ಇಡೀ ರಾಜ್ಯದ ಎಲ್ಲ ಶಾಲೆಗಳಿಗೂ ಒಂದೇ ಮಾರ್ಗದರ್ಶಿಯಾಗಿದೆ ಎಂದು ತಿಳಿಸಿದೆ.

ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಸ್ವಲ್ಪ ಮಾರ್ಪಾಡು ಆಗುತ್ತಿತ್ತು. ಈ ಬಾರಿ ಯಾವುದೇ ಮಾರ್ಪಾಡು ಮಾಡದೆ ಇಡೀ ರಾಜ್ಯದ ಎಲ್ಲ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.

ಅಕ್ಟೋಬರ್ 3ರಿಂದ 20ರವರೆಗೆ 17 ದಿನಗಳ ಕಾಲ ದಸರಾ ರಜೆ ಇರಲಿದೆ. ಅಕ್ಟೋಬರ್ 21ರಿಂದ 2025 ಏಪ್ರಿಲ್ 10ವರೆಗೆ ಶೈಕ್ಷಣಿಕ ವರ್ಷದ ಎರಡನೇ ಅವಧಿಯಾಗಿರಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

2024 -25ನೇ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಶಿಕ್ಷಣ ಇಲಾಖೆ ಶಾಲೆಗಳ ಆರಂಭಕ್ಕೂ ಮೊದಲೇ ಹೊರಡಿಸಿತ್ತು. ಅದರ ಅನುಸಾರ ರಜೆಗಳು ಘೋಷಣೆಯಾಗಿದ್ದು, ಅಕ್ಟೋಬರ್‌ನಲ್ಲಿ 11 ದಿನಗಳು ಮಾತ್ರ ತರಗತಿಗಳು ನಡೆಯಲಿವೆ. 17 ದಿನ ದಸರಾ ರಜೆ ನೀಡಲಾಗಿದೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ