CrimeNEWSನಮ್ಮಜಿಲ್ಲೆ

ಪ್ರೀತಿಸಿದವನೊಂದಿಗೆ ಮಗಳು ಪರಾರಿ: ಮನನೊಂದ ಅಪ್ಪ, ಅಮ್ಮ, ಸೋದರ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಪ್ರೀತಿಸಿದವನ ಜತೆ ಮಗಳು ಓಡಿಹೋದಳು ಎಂದು ಮನನೊಂದ ಪಾಲಕರು ಮತ್ತು ಸಹೋದರ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ತಂದೆ ಶ್ರೀರಾಮಪ್ಪ (65), ತಾಯಿ ಸರೋಜಮ್ಮ (60) ಹಾಗೂ ಮಗ ಮನೋಜ್ (24) ಮೃತರು, ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜತೆ ಪರಾರಿಯಾಗಿದ್ದಕ್ಕೆ ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಈ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಓಡಿಹೋಗಿದ್ದಾಳೆ, ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆಗೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷಯ ತಿಳಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ