NEWSಆರೋಗ್ಯನಮ್ಮಜಿಲ್ಲೆ

ದಾವಣಗೆರೆ: ಹೊನ್ನೂರು ಗ್ರಾಮದ ಎಲ್ಲ ನಿವಾಸಿಗಳಿಗೆ ಜ್ವರ, ಮೈ- ಕೈ ನೋವು

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಉಪತಳಿ ಜೆಎನ್‌.1 ಭಯ ಹುಟ್ಟಿಸಿರುವ ಬೆನ್ನಲ್ಲೇ ಜಿಲ್ಲೆಯ ಗ್ರಾಮವೊಂದರ ಎಲ್ಲ ಜನರಿಗೆ ಜ್ವರ, ಮೈ- ಕೈ ನೋವು ಕಣಿಸಿಕೊಂಡಿದ್ದು, ಅನಾರೋಗ್ಯದಿಂದ ಇಡೀ ಗ್ರಾಮದ ಮಂದಿಯೇ ಬಳಲುತ್ತಿದ್ದಾರೆ.

ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದ ಎಲ್ಲ ನಿವಾಸಿಗಳಿಗೂ ಕಳೆದ ವಾರದಿಂದ ಜ್ವರ, ಮೈ- ಕೈ ನೋವು ಕಾಣಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಬಸವಂತಪ್ಪ ಗ್ರಾಮಕ್ಕೆ ಭೇಟಿ ನೀದ್ದಾರೆ. ಅಲ್ಲದೆ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಶಾಸಕರ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ 25ಕ್ಕೂ ಹೆಚ್ಚು ಜನರಲ್ಲಿ ಚಿಕೂನ್ ಗುನ್ಯಾ ಇರುವುದು ದೃಢವಾಗಿದೆ. ಸೊಳ್ಳೆಯಿಂದ ಇಡೀ ಗ್ರಾಮಕ್ಕೆ ಚಿಕೂನ್ ಗುನ್ಯಾ ಹರಡಿದೆ ಎಂದು ಹೇಳಲಾಗಿದೆ. ಹೀಗಾಗಿ ಗ್ರಾಮದ ಜನರಿಗೆ ಔಷಧ ತೆಗೆದುಕೊಂಡು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಲಾಗಿದೆ.

ಚಳಿಗಾಲ ಬಂದರೆ ಜನರಲ್ಲಿ ಆರೋಗ್ಯ ಶಕ್ತಿ ಕ್ಷಿಣಿಸಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಬೆಚ್ಚನೆಯ ಉಡುಪುಗಳನ್ನು ಧರಿಸಿಕೊಂಡು ಸಾಧ್ಯವಾದಷ್ಟು ಬಿಸಿ ಬಿಸಿ ಆಹಾರವನ್ನು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ