ದಾವಣಗೆರೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮಿತಿಯನ್ನು ಪ್ರಖ್ಯಾತ ವಿಜ್ಞಾನಿ ಪ್ರೊ. ಎಸ್. ಅಯ್ಯಪ್ಪನ್ ಅಧ್ಯಕತೆಯಲ್ಲಿ 3 ವರ್ಷದ ಅವಧಿಗೆ ಪುನರ್ ರಚಿಸಲಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯನ್ನು ಜುಲೈ 2005 ರಲ್ಲಿ ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿವೃತ್ತ ಅಧ್ಯಕ್ಷ ಪದ್ಮವಿಭೂಷಣ ದಿವಂಗತ ಪ್ರೊ.ಯು.ಆರ್. ರಾವ್ ಅವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅಕಾಡೆಮಿಗೆ ಪ್ರತಿ ಮೂರು ವರ್ಷಗಳಿಗೊಮ್ಮೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ಸರ್ಕಾರದಿಂದ ನಾಮ ನಿದೇರ್ಶನ ಮಾಡಲಾಗುತ್ತಿದೆ. ಪ್ರಸುತ್ತ ಅಕಾಡೆಮಿ ಸಮಿತಿಯನ್ನು ನಿವೃತ್ತ ಮಹಾನಿರ್ದೇಶಕರು, ಭಾರತೀಯ ಕೃಷಿ ಸಂಶೋಧನಾ ಪರಿಷತ್¬ ಹಾಗೂ ಸರ್ಕಾರದ ಕಾರ್ಯದರ್ಶಿ, ಕೃಷಿ ಸಂಶೋಧನೆ ಹಾಗೂ ಶಿಕ್ಷಣ ಇಲಾಖೆ , ಭಾರತ ಸರ್ಕಾರ/, ಮಣಿಪುರ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಕುಲಾಧಿಪತಿ ವಿಜ್ಞಾನಿ ಪ್ರೊ. ಎಸ್. ಅಯ್ಯಪ್ಪನ್ ಅಧ್ಯಕತೆಯಲ್ಲಿ ಪುನರ್ ರಚಿಸಲಾಗಿದೆ.
ಈ ಸಮಿತಿಯು 13 ಸದಸ್ಯರನ್ನು ಒಳಗೊಂಡಿದ್ದು ಶಿಕ್ಷಣ ತಜ್ಞರು, ಹೆಸರಾಂತ ವಿಜ್ಞಾನಿಗಳು ಮತ್ತು ಸರ್ಕಾರದ ಹಿರಿಯ ಆಡಳಿತಗಾರರು ಸದಸ್ಯರಾಗಿದ್ದಾರೆಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail