ದಾವಣಗೆರೆ: 1991ರಲ್ಲಿ ಉದ್ಘಾಟನೆಯಾದ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ೩೩ನೇ ವರ್ಷದ ವಾರ್ಷಿಕೋತ್ಸವ ಜ.14 ರ ಅಪರಾಹ್ನ 3 ಗಂಟೆಗೆ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಕಲಾಕುಂಚ ಮಹಿಳಾ ವಿಭಾಗದಿಂದ ಬೈಕ್ ರ‍್ಯಾಲಿ ನಡೆಯಲಿದ್ದು ದಾವಣಗೆರೆ ಮಹಾನಗರಪಾಲಿಕೆಯ ಮಹಾಪೌರರಾದ ಜಯಮ್ಮ ಗೋಪಿನಾಯ್ಕ ಚಾಲನೆ ನೀಡಲಿದ್ದಾರೆ. ಅಪರಾಹ್ನ 3 ಗಂಟೆಗೆ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಹಿರಿಯ ಪತ್ರಕರ್ತ ಮಂಜುನಾಥ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿಸೋಜ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶಣೈ, ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಯಕ್ಷರಂಗ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಗೌರವ ಅಧ್ಯಕ್ಷರಾದ ನಲ್ಲೂರು ಲಕ್ಷ್ಮಣ್‌ರಾವ್, ಕಲಾಕುಂಚ ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ, ಲಲಿತಾ ಕಲ್ಲೇಶ್, ಪ್ರಭಾ ರವೀಂದ್ರ, ಡಾ. ನಿರ್ಮಲಾ ವಿಶ್ವನಾಥ್, ವಿ. ಕೃಷ್ಣಮೂರ್ತಿ, ವಿಜಯಲಕ್ಷಿಂರಾವ್ ಡಾ. ಚಂದ್ರಪ್ಪ ಆಗಮಿಸಲಿದ್ದಾರೆ.
ಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ರಾಜ್ಯ ಮಟ್ಟದ ಉಚಿತ “ಕವನ ಸ್ಪರ್ಧೆ “ಕಾರ್ಡಿನಲ್ಲಿ ಕಥೆ” ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅಭಿನಂದನಾ ಪತ್ರ ಬಹುಮಾನ ವಿತರಣೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಮಹದೇವ ಅಸಗೋಡು ತಿಳಿಸಿದ್ದಾರೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಬಾಲ್ಯದಿಂದಲೂ ನಿರಂತರ ಸಾಧನೆಗೈದ ಕುಮಾರಿ ಗೌರಿ ನರಸಿಂಹಾಚಾರ್ ಮಣ್ಣೂರು ಅವರಿಗೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಶೃಂಗಾರ ಕಾವ್ಯ ಪ್ರಕಾಶನದಿಂದ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನಿಸಿ, ಸನ್ಮಾನಿಸಿ, ಗೌರವಿಸಲಾಗುವುದು. ಕಲಾಕುಂಚ ಎಸ್.ಎಸ್. ಬಡಾವಣೆ ಶಾಖೆಯ ಮಹಿಳಾ ತಂಡದಿಂದ ಸಮೂಹ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.