NEWSನಮ್ಮರಾಜ್ಯಬೆಂಗಳೂರುರಾಜಕೀಯ

ಸರ್ಕಾರಗಳಿಂದ ಹೆದ್ದಾರಿಯಲ್ಲಿ ಹಗಲು ದರೋಡೆ : ಮಾಜಿ ಸಿಎಂ ಎಚ್‌ಡಿಕೆ ಗರಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ ಎಂದು ಸರಣ ಟ್ವೀಟ್‌ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ‘ಹೆದ್ದಾರಿಯಲ್ಲಿ ಹಗಲು ದರೋಡೆ’ಯಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ 20% ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂದು ಗರಂ ಆಗಿದ್ದಾರೆ.

ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನೇ ‘ಅಧಿಕೃತ ವ್ಯವಹಾರ’ ಮಾಡಿಕೊಂಡಿವೆ. ಇನ್ನೂ ರಾಜ್ಯದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಿಗೂ ಬರೆ ಎಳೆಯುತ್ತಿದೆ ಎಂದು ಹೇಳಿದ್ದಾರೆ.

ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹಾಕಬೇಕು. ಬೆಲೆಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ ಜನರು ತಕ್ಕಪಾಠ ಕಲಿಸುತ್ತಾರೆ. ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ ಬಿಜೆಪಿ ಸರ್ಕಾರದ ದಾರಿಯಲ್ಲಿಯೇ ಈ ಸರ್ಕಾರವೂ ನಡೆಯುತ್ತಿದೆಯಾ? ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ‌ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು